ಬೀದರ್ : ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಅಕ್ಕ ಪಡೆ ವಿಸ್ತರಣೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರ ಸುರಕ್ಷತೆ ಹಿನ್ನೆಲೆಯಲ್ಲಿ ಬೀದರ್ ಜಿಲ್ಲಾ ಪೊಲೀಸರು ರಚಿಸಿರುವ ಮಹಿಳಾ ಪೊಲೀಸರ ಅಕ್ಕ ಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಗೃಹ ಸಚಿವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಮಹಿಳೆಯರ ರಕ್ಷಣೆ ಹಾಗೂ ಸಮಸ್ಯೆ ಬಗೆಹರಿಸಲು ಅಕ್ಕ ಪಡೆ ಮಾದರಿ ಮತ್ತು ಶ್ಲಾಘನೀಯವಾಗಿದೆ. ಇಂಥ ಪಡೆಯನ್ನು ಪ್ರತಿ ಜಿಲ್ಲೆಯಲ್ಲಿ ರಚಿಸುವಂತೆ ಗೃಹ ಸಚಿವರೊಂದಿಗೆ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ.