Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕರ್ನಾಟಕದಲ್ಲೂ ‘SIR’ ಪ್ರಕ್ರಿಯೆ ಆರಂಭ: ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಚೆಕ್ ಮಾಡಿಕೊಳ್ಳಿ
KARNATAKA

BIG NEWS : ಕರ್ನಾಟಕದಲ್ಲೂ ‘SIR’ ಪ್ರಕ್ರಿಯೆ ಆರಂಭ: ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಚೆಕ್ ಮಾಡಿಕೊಳ್ಳಿ

By kannadanewsnow57

ಬೆಂಗಳೂರು: ದೇಶವ್ಯಾಪಿ ಹಮ್ಮಿಕೊಳ್ಳಲಾಗಿರುವ 3ನೇ ಹಂತದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಈಗ ಕರ್ನಾಟಕದಲ್ಲೂ ಆರಂಭವಾಗಿದೆ. ರಾಜ್ಯದ ಒಟ್ಟು 5.57 ಕೋಟಿ ಮತದಾರರ ವಿವರಗಳ ಮರುಪರಿಶೀಲನೆ ಈ ಅಭಿಯಾನದ ಮೂಲಕ ನಡೆಯಲಿದೆ.

ಏನಿದು ‘ಸರ್’ (SIR)?

‘ಒಬ್ಬ ವ್ಯಕ್ತಿ, ಒಂದು ಮತ’ ಎಂಬ ತತ್ವವನ್ನು ಬಲಪಡಿಸಲು ಭಾರತೀಯ ಚುನಾವಣಾ ಆಯೋಗವು ಈ ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಇದರಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿ ಪಡೆಯಲಿದ್ದಾರೆ.

ಮೃತಪಟ್ಟವರು, ಬೇರೆಡೆಗೆ ಸ್ಥಳಾಂತರಗೊಂಡವರು ಮತ್ತು ಅನರ್ಹರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ.

18 ವರ್ಷ ಪೂರೈಸಿದ ಹೊಸ ಮತದಾರರನ್ನು ಪಟ್ಟಿಗೆ ಸೇರಿಸಲು ಇಲ್ಲಿ ಅವಕಾಶವಿದೆ.

ಪರಿಷ್ಕರಣೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?

ಮನೆ-ಮನೆಗೆ ಭೇಟಿ: ಬಿ.ಎಲ್.ಒ ಅಧಿಕಾರಿಗಳು ನಿಮ್ಮ ಮನೆಗೆ ಬಂದು ಫಾರ್ಮ್ ನೀಡುತ್ತಾರೆ. ಹೆಸರು, ವಿಳಾಸ, ವಯಸ್ಸು, ಆಧಾರ್ ಇತ್ಯಾದಿ ವಿವರಗಳನ್ನು ಭರ್ತಿ ಮಾಡಿ ಸಹಿ ಮಾಡಬೇಕು.

ಕರಡು ಪಟ್ಟಿ ಪ್ರಕಟಣೆ: ಮಾಹಿತಿ ಸಂಗ್ರಹದ ನಂತರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಕ್ಷೇಪಣೆ ಸಲ್ಲಿಸಲು ಅವಕಾಶ: ಕರಡು ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಅಥವಾ ತಪ್ಪುಗಳಿದ್ದರೆ ಸರಿಪಡಿಸಲು ಈ ಹಂತದಲ್ಲಿ ಅರ್ಜಿ ಸಲ್ಲಿಸಬಹುದು.

ಅಂತಿಮ ಪಟ್ಟಿ: ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

ಮತದಾರರು ಏನು ಮಾಡಬೇಕು?
ತಕ್ಷಣ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂದು voters.eci.gov.in ವೆಬ್ಸೈಟ್ ಅಥವಾ Voter Helpline App ಮೂಲಕ ಪರಿಶೀಲಿಸಿ.
ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಇಂದೇ ಪರಿಶೀಲಿಸಿ

1 . ತಕ್ಷಣದ ಹೆಸರು ಪರಿಶೀಲನೆ:

ಮತದಾರರು ಆಯೋಗದ ಅಧಿಕೃತ ವೆಬ್ಸೈಟ್ voters.eci.gov.in ಗೆ ಭೇಟಿ ನೀಡಿ ಪಟ್ಟಿಯಲ್ಲಿ ಹೆಸರಿರುವುದನ್ನು ಖಚಿತಪಡಿಸಿಕೊಳ್ಳಬಹುದು. ಮೊಬೈಲ್ ಬಳಕೆದಾರರು ‘Voter Helpline App’ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ 1950 ಸಂಖ್ಯೆಗೆ EPIC <ನಿಮ್ಮ ಎಪಿಕ್ ನಂಬರ್> ಎಂದು ಎಸ್ಎಂಎಸ್ (SMS) ಕಳುಹಿಸುವ ಮೂಲಕವೂ ಮಾಹಿತಿ ಪಡೆಯಬಹುದು.

2. ಬಿ.ಎಲ್.ಒ (BLO) ಭೇಟಿ ನೀಡಿದಾಗ ಸಹಕರಿಸಿ:
ನಿಮ್ಮ ಮನೆಗೆ ಬರುವ ಬಿ.ಎಲ್.ಒ ನೀಡುವ ಎಣಿಕೆ ಫಾರ್ಮ್ ಅನ್ನು ಸರಿಯಾಗಿ ತುಂಬಿ, ಸಹಿ ಮಾಡಿ ಹಿಂತಿರುಗಿಸಬೇಕು. ಈ ಸಂದರ್ಭದಲ್ಲಿ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಅಥವಾ ವಯಸ್ಸಿನ ಪುರಾವೆ ಒದಗಿಸುವ ದಾಖಲೆಗಳನ್ನು ಸಿದ್ಧವಿಟ್ಟುಕೊಳ್ಳುವುದು ಉತ್ತಮ.

3. ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ:
ಹೊಸದಾಗಿ ಹೆಸರು ಸೇರಿಸಲು ಅಥವಾ ತಿದ್ದುಪಡಿಗಳಿದ್ದಲ್ಲಿ voters.eci.gov.in ವೆಬ್ಸೈಟ್ ಮೂಲಕ ಆನ್ಲೈನ್ನಲ್ಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

4. ಕರಡು ಪಟ್ಟಿ ಮತ್ತು ಆಕ್ಷೇಪಣೆ:
ಒಂದು ವೇಳೆ ಕರಡು ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದರೆ ಫಾರ್ಮ್-6 ಮೂಲಕ ಹಕ್ಕು ಸಲ್ಲಿಸಬಹುದು. ಪಟ್ಟಿಯಲ್ಲಿ ತಪ್ಪುಗಳಿದ್ದರೆ ಅಥವಾ ಅನರ್ಹ ಹೆಸರುಗಳಿದ್ದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಚುನಾವಣಾ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 1950 ಕ್ಕೆ ಸಂಪರ್ಕಿಸಬಹುದು.
ಯುವ ಮತದಾರರಿಗೆ ಹೆಚ್ಚಿನ ಒತ್ತು

ಈ ಪ್ರಕ್ರಿಯೆಯು ನಕಲಿ ಮತ್ತು ದ್ವಿಪ್ರತಿ ಮತದಾನವನ್ನು ತಡೆಗಟ್ಟಲು ಸಹಕಾರಿಯಾಗಿದೆ. ಇದರಿಂದ ಚುನಾವಣಾ ವ್ಯವಸ್ಥೆ ಹೆಚ್ಚು ಪಾರದರ್ಶಕ ಮತ್ತು ನಿಖರವಾಗಲಿದೆ. ಕರ್ನಾಟಕದಲ್ಲಿ ಈ ಹಿಂದೆ 2002ರಲ್ಲಿ ಇಂತಹ ಬೃಹತ್ ಮಟ್ಟದ ಪರಿಷ್ಕರಣೆ ನಡೆದಿತ್ತು, ಅಂದರೆ ಸುಮಾರು 24 ವರ್ಷಗಳ ಬಳಿಕ ಈಗ ಮತ್ತೆ ಇಂತಹ ಕಾರ್ಯ ನಡೆಯುತ್ತಿದೆ.

BIG NEWS: 'SIR' process starts in Karnataka too: Check if your name is in the voter list
Share. Facebook Twitter LinkedIn WhatsApp Email

Related Posts

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

2 Mins Read

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read
Recent News

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

State News
KARNATAKA

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪವರ್‌ ಕಂಪನಿ ಆಫ್‌ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್‌ಗೆ 9.08 ರೂಪಾಯಿಯಂತೆ…

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.