ನವದೆಹಲಿ : ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಪೂರ್ವಸಿದ್ಧತಾ ಕಾರ್ಯಗಳನ್ನು “ಏಪ್ರಿಲ್‌ನಿಂದ ಪ್ರಾರಂಭವಾಗುವ ನಿರೀಕ್ಷೆಯಿದೆ” ಎಂದು ಚುನಾವಣಾ ಆಯೋಗ ಗುರುವಾರ 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಿಳಿಸಿದೆ.
ಬಿಹಾರ, ಪಶ್ಚಿಮ ಬಂಗಾಳ ಬಳಿಕ ಈಗ ಕರ್ನಾ ಟಕದಲ್ಲೂ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಮುಂದಿನ ಏಪ್ರಿಲ್ ನಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ. ಕೇಂದ್ರ ಚುನಾವಣಾ ಆಯೋಗ ಈ ಹಿಂದೆಯೇ ಕರ್ನಾಟಕ ಸೇರಿ ಕೆಲ ರಾಜ್ಯಗಳಿಗೆ ಎಸ್‌ಐಆರ್ ಸಂಬಂಧ ಪೂರ್ವ ಸಿದ್ಧತೆಗಳನ್ನು ನಡೆಸುವಂತೆ ಸೂಚಿಸಿತ್ತು. ಇದೀಗ ಆ ಪೂರ್ವ ಸಿದ್ಧತೆಗಳನ್ನು ಆದಷ್ಟು ಬೇಗ ಮುಗಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ. ಕೇಂದ್ರ ಚುನಾವಣಾ ಆಯೋಗದ ಸೂಚನೆ ಪ್ರಕಾರ ಮುಂದಿನ ಏಪ್ರಿಲ್‌ನಲ್ಲಿ ಈ ಎಸ್‌ಐಆರ್ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆಯಿದೆ.
ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಚಂಡೀಗಢ, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ಡಿಯು, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಕರ್ನಾಟಕ, ಲಡಾಖ್, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ದೆಹಲಿ, ಒಡಿಶಾ, ಪಂಜಾಬ್, ಸಿಕ್ಕಿಂ, ತ್ರಿಪುರ, ತೆಲಂಗಾಣ ಮತ್ತು ಉತ್ತರಾಖಂಡ್‌ಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ, ಮತದಾರರ ಪಟ್ಟಿಯ ಪ್ಯಾನ್-ಇಂಡಿಯಾ SIR ಅನ್ನು ಕಳೆದ ವರ್ಷ ಜೂನ್’ನಲ್ಲಿ ಆದೇಶಿಸಲಾಗಿದೆ ಎಂದು ಚುನಾವಣಾ ಪ್ರಾಧಿಕಾರ ತಿಳಿಸಿದೆ.








