ಹುಬ್ಬಳ್ಳಿ : ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಮಾರ್ಚ್ 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಫಯಾಜ್ ಎಂಬಾತ ವಿದ್ಯಾರ್ಥಿನಿ ನೇಹಾಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಇದೀಗ ಒಂದು ವಾರದಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ.
ಪ್ರೀತಿ ನಿರಾಕರಿಸಿದ್ದಕ್ಕೆ ನೇಹಾಳನ್ನು ಹತ್ಯೆ ಮಾಡಿದ್ದ. ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿತ್ತು. 6 ದಿನಗಳ ಕಾಲ ಆರೋಪಿ ಫಯಾಜ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಫಯಾಜ್ ತಂದೆ-ತಾಯಿಯನ್ನು ವಿಚಾರಣೆಗೆ ಒಳಪಡಿಸಿದ್ದ ಎಸ್‌ಐಟಿ ಇದೀಗ ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ನಡೆಸಿದೆ ಎನ್ನಲಾಗಿದೆ.