ಹಾವೇರಿ : ಕಳೆದ 2 ದಿನಗಳ ಹಿಂದೆ ಜಿಲ್ಲೆಯಲ್ಲಿ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಪ್ಪಲಿ ಹಾರ ಹಾಕಿ ಶಿಕ್ಷಕನ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಹಾವೇರಿಯಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಶಿಕ್ಷಕ ಜಗದೀಶ್ ಗೆ ಪೋಷಕರು ಹಾಗೂ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿತ್ತು. ಇದೀಗ ಚಪ್ಪಲಿ ಹಾರ ಹಾಕಿದವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಸವಣೂರು ಪಟ್ಟಣದ ಸರ್ಕಾರಿ ಉರ್ದು ಉನ್ನತಿಕರಿಸದ ಶಾಲೆಯ ಶಿಕ್ಷಕನಿಗೆ ಥಳಿಸಿದ್ದಾರೆ.ಅಲ್ಲದೇ ಚಪ್ಪಲಿ ಹಾರ ಹಾಕಿ ಶಿಕ್ಷಕನನ್ನು ಸವಣೂರು ಠಾಣೆಗೆ ವಿದ್ಯಾರ್ಥಿನಿಯರ ಪೋಷಕರು ಕರೆತಂದಿದ್ದಾರೆ. ಧರ್ಮದೇಟು ನೀಡಿ ಜಗದೀಶ್ ನನ್ನು ಪೊಲೀಸರಿಗೆ ಪೋಷಕರು ಒಪ್ಪಿಸಿದ್ದರು.








