ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ನಾಳೆ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಧುನಿಕ ಬೆಂಗಳೂರು ನಿರ್ಮಾಣಕ್ಕೆ ಅನೇಕ ಯೋಜನೆ ರೂಪಿಸಿದ್ದಾರೆ. ವಿಕಾಸಸೌಧ ನಿರ್ಮಾಣ, ಫ್ಲೈಓವರ್ ಗಳು, ಮೆಟ್ರೋ, ಐಟಿ ಬಿಟಿ ವಲಯಕ್ಕೆ ಉತ್ತೇಜನ ನೀಡಿದ್ದರು. ಜೊತೆಗೆ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ತರುವ ಮೂಲಕ ಮರಳಿ ಮಕ್ಕಳು ಶಾಲೆಗೆ ಬರುವಂತೆ ಮಾಡಿದ್ದರು. ಯಶಸ್ವಿನಿ ಯೋಜನೆಯ ಮೂಲಕ ರೈತ ಸಮುದಾಯಕ್ಕೆ ಚಿಕಿತ್ಸೆ ಸೌಲಭ್ಯ ಕಲ್ಪಿಸಿದ್ದರು. ಎಸ್.ಎಂ.ಕೃಷ್ಣ ಮುಖ್ಯಮಂತ್ರಿ ಆಗಿದ್ದ ವೇಳೆ ನೀರಾವರಿ ಸೇರಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.
ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತಮ್ಮಿಷ್ಟದ ಕಾಫಿ ಡೇ ಜಾಗದಲ್ಲೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.