ಬೆಂಗಳೂರು : ರಾಜ್ಯ ಸರ್ಕಾರದಿಂದ ನೇರವಾಗಿ/ ಪರೋಕ್ಷವಾಗಿ ನೇಮಕಗೊಂಡಿರುವ ವಿವಿದ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ವ್ಯವಸ್ತೆಯನ್ನು ಜಾರಿಗೆ ತರುವ ಅಥವಾ ವಿಸ್ತರಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ದಿನಾಂಕ:30.01.2025 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ತಿರ್ಮಾನಿಸಿದಂತೆ, ಅಧಿಕಾರಿಗಳು/ನೌಕರರ ಮತ್ತು ಅವಲಂಬಿತ ಕುಟುಂಬ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ, ಈ ಕೆಳಗಿನಂತೆ ಆದೇಶಿಸಲಾಗಿದೆ:
a) ವಿವಿಧ ಬ್ಯಾಂಕುಗಳು ಒದಗಿಸುವ “ಸಂಬಳ ಪ್ಯಾಕೇಜ್‌ಗಳ* ಅಡಿಯಲ್ಲಿ ಖಾತೆಗಳನ್ನು ತೆರೆಯುವುದು/ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿಗಳು / ನೌಕರರಿಗೆ (ಸರ್ಕಾರಿ /ಸರ್ಕಾರಿ ಸಂಸ್ಥೆಗಳು, ಇತ್ಯಾದಿ) ಕಡ್ಡಾಯಗೊಳಿಸುವುದು.
b) ಬ್ಯಾಂಕ್‌ಗಳು/ಅಂಚೆ ಕಚೇರಿಗಳು ನೀಡುವ PMJJBY ಮತ್ತು PMSBY ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವಿಮಾ ರಕ್ಷಣೆಯನ್ನು ಪಡೆಯಲು ಅಧಿಕಾರಿಗಳು / ನೌಕರರನ್ನು ಪ್ರೋತ್ಸಾಹಿಸುವುದು.
c) ಬ್ಯಾಂಕ್‌ಗಳು ನೀಡುವ ವಿವಿಧ ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವೈಯಕ್ತಿಕ ಅಪಘಾತ ವಿಮಾ ರಕ್ಷಣೆಯನ್ನು ಪಡೆಯಲು ಅಧಿಕಾರಿಗಳು / ನೌಕರರನ್ನು ಪ್ರೋತ್ಸಾಹಿಸುವುದು.
ಈ ಹಿನ್ನೆಲೆಯಲ್ಲಿ ಮತ್ತು ಕರ್ನಾಟಕ ಸರ್ಕಾರವು ಸರ್ಕಾರಿ ಮತ್ತು ಇತರೆ ಸರ್ಕಾರಿ ಅಂಗ ಸಂಸ್ಥೆಗಳ ಉದ್ಯೋಗಿಳಿಗೆ ವಿವಿಧ ಕಲ್ಯಾಣ ಕ್ರಮಗಳನ್ನು ನೀಡಿದ್ದು, ಈಗಾಗಲೇ ಜಾರಿಯಲ್ಲಿರುವ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲುಪಡಿಸಲು ಮತ್ತು ಸುಗಮಗೊಳಿಸುವ ಸಲುವಾಗಿ ಸರ್ಕಾರದಿಂದ ನೇರವಾಗಿ/ಪರೋಕ್ಷವಾಗಿ ನೇಮಕಗೊಂಡಿರುವ ವಿವಿಧ ಅಧಿಕಾರಿಗಳು / ನೌಕರರಿಗೆ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರುವ ಕುರಿತು ಚರ್ಚಿಸಲು ಪ್ರಮುಖ ಬ್ಯಾಂಕುಗಳ ಅಧಿಕಾರಿಗಳೊಂದಿಗೆ ಹಾಗೂ ರಾಜ್ಯದ ಪ್ರಮುಖ ನೌಕರರ ಸಂಘಗಳ ಅಧ್ಯಕ್ಷರು/ಪ್ರತಿನಿಧಿಗಳೊಂದಿಗೆ ಸರ್ಕಾರದ ಕಾರ್ಯದರ್ಶಿ (ವಿತ್ತೀಯ ಸುಧಾರಣೆ) ರವರ ಅಧ್ಯಕ್ಷತೆಯಲ್ಲಿ ದಿನಾಂಕ 17.02.2025 ರಂದು ಮಧ್ಯಾಹ್ನ 4.00 ಗಂಟೆಗೆ, ಕೊಠಡಿ ಸಂಖ್ಯೆ: 317, ವಿಕಾಸಸೌಧ, ಬೆಂಗಳೂರು ರಲ್ಲಿ ಸಭೆಯನ್ನು ನಡೆಸಲು ತೀರ್ಮಾನಿಸಲಾಗಿದೆ. ಸದರಿ ಸಭೆಗೆ ಅಗತ್ಯ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗುವಂತೆ ಕೋರಿದೆ.