ಬೆಂಗಳೂರು : ನಗರದ ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್‌ನಲ್ಲಿ ಪ್ರದರ್ಶನ ನೀಡುತ್ತಿದ್ದ ಸೋನು ನಿಗಮ್ ಕನ್ನಡ ಹಾಡು ಎಂದ ಕನ್ನಡಿಗನಿಗೆ ಪಹಲ್ಗಾಮ್ ಉಗ್ರರ ದಾಳಿಯನ್ನು ಹೋಲಿಕೆ ಮಾಡಿದ್ದು, ಗಾಯಕನ ವಿರುದ್ಧ ಕನ್ನಡಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೌದು, ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಆಯೋಜಿಸಿದ್ದ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಾಭಿಮಾನವನ್ನು ಭಯೋತ್ಪಾದಕತೆಗೆ ಹೋಲಿಸಿದ್ದಾರೆಂದು ಆರೋಪಿಸಿ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕನ್ನಡಿಗರನ್ನು ಅವಮಾನಿಸಿರುವ ಸೋನು ನಿಗಮ್‌ರನ್ನು ಕನ್ನಡ ಚಿತ್ರರಂಗದಿಂದಲೇ ನಿರ್ಬಂಧಿಸಬೇಕು ಎಂದು ಒತ್ತಾಯ ಕೇಳಿಬರುತ್ತಿದೆ.
ಬೆಂಗಳೂರಿನ ಕಾಲೇಜೊಂದರಲ್ಲಿ ಆಯೋಜಿಸಿದ್ದ ಸಂಗೀತ ಕಾರ್ಯಕ್ರಮದಲ್ಲಿ ಸೋನು ನಿಗಮ್ ಹಿಂದಿ ಹಾಡು ಹಾಡುತ್ತಿದ್ದರು. ಆಗ ವಿದ್ಯಾರ್ಥಿಯೊಬ್ಬ ಕನ್ನಡ ಕನ್ನಡ ಎಂದು ಪಟ್ಟುಹಿಡಿಯುವಂತೆ ಬೇಡಿಕೆ ಇಟ್ಟ. ಯುವಕನ ವರ್ತನೆಯಿಂದ ಬೇಸತ್ತ ಸೋನು ನಿಗಮ್ ಅವರು ತಾಳ್ಮೆಕಳೆದುಕೊಂಡು ಈ ಸಮಯದಲ್ಲಿ ಹಾಡನ್ನು ಅರ್ಧಕ್ಕೆ ನಿಲ್ಲಿಸಿದ ಸೋನು ನಿಗಮ್ ʼಪಹಲ್ಗಾಮ್‌ನಲ್ಲಿ ನಡೆದ ಘಟನೆಯ ಕಾರಣ ಇದೇ. ನಿಮ್ಮ ಮುಂದೆ ಯಾರು ನಿಂತಿದ್ದಾರೆ ಎಂದು ನೋಡಿ ಎಂದು ಹೇಳಿದ್ದಾರೆ.
ಕನ್ನಡ ಹಾಡು ಹಾಡಿ ಎಂದ ವಿದ್ಯಾರ್ಥಿಗೆ ಪಹಲ್ಗಾಮ್ ಉಗ್ರರ ದಾಳಿ ಹೋಲಿಕೆ ಮಾಡಿ ಕನ್ನಡಿಗರಲ್ಲಿ ಸಂಪಾದಿಸಿದ್ದ ಗೌರವಕ್ಕೆ ಧಕ್ಕೆ ತಂದುಕೊಂಡಿದ್ದಾರೆ. ಸೋನು ನಿಗಮ್‌ರ ಈ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದು, ಕನ್ನಡ ಚಿತ್ರರಂಗದಿಂದಲೇ ನಿರ್ಬಂಧಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ.
https://www.instagram.com/reel/DI4F-F8hxal/?utm_source=ig_embed&ig_rid=07f50926-e290-4da7-9103-65eafdaf6058