ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸಚಿವರ ಬಹಿರಂಗ ಹೇಳಿಕೆಯಿಂದ ಉಂಟಾಗಿದ್ದ ಗೊಂದಲಕ್ಕೆ ಇದೀಗ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೆರೆ ಎಳೆದಿದ್ದಾರೆ. ಎಲರೂ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ವಾರ್ನಿಂಗ್ ನೀಡಿದ ಬೆನ್ನಲ್ಲೆ ಕೈ ನಾಯಕರು ಇದೀಗ ಫುಲ್ ಸೈಲೆಂಟಾಗಿದ್ದಾರೆ.
ಇನ್ನು ಈ ವಿಚಾರವಾಗಿ ಬೆಂಗಳೂರಲ್ಲಿ ಮಲ್ಲಿಕಾರ್ಜುನ ಖರ್ಗೆ ಪುತ್ರ ಸಚಿವ ಪ್ರಿಯಾಂಕ್ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಮೊದಲು ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಅವರು ಸೂಚಿಸಿದ್ದರು. ಅದನ್ನು ಎ ಐ ಸಿ ಸಿ ಅಧ್ಯಕ್ಷರು ಮತ್ತೆ ಪುನರುಜ್ಜಾರ ಮಾಡಿದ್ದಾರೆ ಅಷ್ಟೇ. ಯಾರ ಬಾಯಿಗೂ ಕೂಡ ಬೀಗ ಹಾಕಲು ಆಗಲ್ಲ. ವಿವೇಚನೆ ಬಳಸಿ ಮಾತನಾಡಬೇಕು. ಮಾತಿನಿಂದ ಪಕ್ಷಕ್ಕೆ ಹಾನಿಯಾಗುತ್ತಾ ಎಂದು ಯೋಚಿಸಬೇಕು.
ಬಿ ಫಾರಂ ಕೊಡಲು ಪಕ್ಷ ಬೇಕು ಬಳಿಕ ಅಧ್ಯಕ್ಷರು ಯಾರು? ರಾಹುಲ್ ಗಾಂಧಿ ಯಾರು? ಹೈಕಮಾಂಡ್ ಏನು ಮಾಡುತ್ತದೆ ಅಂತ ಹೇಳುವುದು ಸರಿಯಲ್ಲ. ಸಿಎಂ, ಡಿಸಿಎಂ ಮಲ್ಲಿಕಾರ್ಜುನ್ ಖರ್ಗೆ ಸಂದೇಶ ಕೊಟ್ಟಿದ್ದಾರೆ.ಅವರ ಸೂಚನೆಯ ಮೇರೆಗೆ ನಾವೆಲ್ಲರೂ ಕೆಲಸ ಮಾಡಬೇಕು ಎಂದು ಬೆಂಗಳೂರಿನಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದರು.