ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜುಲೈ 5ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-3 ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಪ್ರಮುಖ ನಿಯಮ ಪಾಲಿಸುವಂತೆ ಸೂಚನೆ ನೀಡಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸುವುದು ಕಡ್ಡಾಯವಾಗಿರುತ್ತದೆ. ಸಿಸಿಟಿವಿ ಗಳು ಪರೀಕ್ಷಾ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಹಾಗೂ ಜಿಲ್ಲಾ ಪಂಚಾಯ್ತಿಯ ಸಿಇಓ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾನಿಟರ್ ಮಾಡಲಾಗುತ್ತದೆ.
ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ
ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ
ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ
ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ.
ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ
ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ
ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.
ವೇಳಾಪಟ್ಟಿ
ಜುಲೈ 05 ರಿಂದ 11 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-3 ನಡೆಯಲಿದೆ.
ಜುಲೈ 05 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಪ್ರಥಮ ಭಾಷೆ
ಜುಲೈ 07ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ವಿಜ್ಞಾನ
ಜುಲೈ 08ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ದ್ವಿತೀಯ ಭಾಷೆ
ಜುಲೈ 09ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಗಣಿತ
ಜುಲೈ 10ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ತೃತೀಯ ಭಾಷೆ ಮತ್ತು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.15 ರವರೆಗೆ ಎನ್ಎಸ್ಕ್ಯೂಎಫ್ ವಿಷಯಗಳು
ಜುಲೈ 11ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಸಮಾಜ ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ.