ಬೆಂಗಳೂರು : ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಲಿವೇ. ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಇದೀಗ ಶುಭ ಕೋರಿದ್ದಾರೆ. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ನಾಳೆಯಿಂದ ಏಪ್ರಿಲ್ 2 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಇದೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್.
ನಮ್ಮ ಸರ್ಕಾರ ಹಲವು ಸುಧಾರಣೆ ಮಾಡಿ ಮೂರು ಪರೀಕ್ಷೆ ಮಾಡುತ್ತಿದ್ದೇವೆ. ವಿದ್ಯಾರ್ಥಿಗಳು ಯಾರು ಆತಂಕ ಪಡಬೇಕಿಲ್ಲ ಒಂದಲ್ಲ ಇನ್ನೊಂದು ಪರೀಕ್ಷೆ ಬರೆಯಬಹುದು. ಯಾವುದೇ ಆತಂಕ ಬೇಡ ಎಲ್ಲರಿಗೂ ಒಳ್ಳೆಯದಾಗಲಿ. ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸ್ ಆಗಲಿ. ಸರ್ಕಾರದ ಕಡೆಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶುಭ ಕೋರುತ್ತೇನೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.








