Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘AI ರಚಿತ’ ವಿಷಯಗಳಿಗೆ ‘ಲೇಬಲ್’ ಕಡ್ಡಾಯ ; ಸೋಷಿಯಲ್ ಮೀಡಿಯಾಗಳಿಗೆ ಕೇಂದ್ರ ಸರ್ಕಾರ ಆದೇಶ!

10/02/2026 6:15 PM

BREAKING: ಅವಿಶ್ವಾಸ ನಿರ್ಣಯದವರೆಗೆ ಸ್ಪೀಕರ್ ಪೀಠದಲ್ಲಿ ಕೂರದಿರಲು ಓಂ ಬಿರ್ಲಾ ನಿರ್ಧಾರ

10/02/2026 6:07 PM

‘ಮಾಜಿ ದೇವದಾಸಿ ಮಹಿಳೆ’ಯರ ‘ಮರು ಸಮೀಕ್ಷಾ ವರದಿ’ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

10/02/2026 5:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮಾ.21 ರಿಂದ ರಾಜ್ಯಾದ್ಯಂತ ‘SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳ ಕುರಿತು ಇಲ್ಲಿದೆ ಮಾಹಿತಿ
KARNATAKA

BIG NEWS : ಮಾ.21 ರಿಂದ ರಾಜ್ಯಾದ್ಯಂತ ‘SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳ ಕುರಿತು ಇಲ್ಲಿದೆ ಮಾಹಿತಿ

By kannadanewsnow5718/03/2025 5:11 AM

ಬೆಂಗಳೂರು: ರಾಜ್ಯದಲ್ಲಿ ಮಾ.21ರಿಂದ ಏ.4ರವರೆಗೆ 2818 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 896,447 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. 8,42,817 ಹೊಸಬರು, 38,091 ಪುನರಾವರ್ತಿತರು ಹಾಗೂ 15,539 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯವ್ಯಾಪಿ ಪರೀಕ್ಷೆಗೆ 15881 ಶಿಕ್ಷಣ ಸಂಸ್ಥೆಗಳು ನೋಂದಾಯಿಸಿಕೊಂಡಿವೆ.

ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಹಾಗೂ ನಕಲು ತಡೆಯಲು ಎಲ್ಲ 2818 ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್‌ ಅಳವಡಿಸಲಾಗಿದೆ. ಇಡೀ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಇದನ್ನು ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತದೆ. ಎಲ್ಲ ಅಕ್ರಮಗಳು ಕಂಪ್ಯೂಟರ್ ಪರದೆಯಲ್ಲಿ ಗೋಚರವಾಗುವಂತೆ ವ್ಯವಸ್ಥೆ ಮಾಡಲಾಗಿದೆ.

ಮಾ.21 ರಿಂದ ಏ.04 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ.

ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ
ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ
ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ.
ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ
ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ
ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.

ಸೂಚನೆಗಳು:

1. 05.04.2025 (2) 28… (56, 57, 58 & 59 ವಿಷಯಗಳು) ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುವುದು.

2. ವಿಷಯ ಸಂಕೇತ 15 ಮತ್ತು 60ರ ವಿಷಯಗಳು ಆದರ್ಶ ವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತವೆ.

3. ಹಿಂದೂಸ್ಥಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಸಾಯಂಕಾಲ 5.15 ರವರೆಗೆ ನಿಗದಿಪಡಿಸಿದೆ. ಸದರಿ ವಿಷಯಗಳ ತಾತ್ವಿಕ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಮಧ್ಯಾಹ್ನ 3.45 ಗಂಟೆಯವರೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ಮಧ್ಯಾಹ್ನ 3.45 ರಿಂದ ಸಾಯಂಕಾಲ 5.15 ಗಂಟೆಯವರೆಗೆ ನಡೆಸಲಾಗುವುದು.

4. ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಮೂರು ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 60 ನಿಮಿಷಗಳು, ಎರಡೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 50 ನಿಮಿಷಗಳು, ಎರಡು ಗಂಟೆಯ ಪ್ರಶ್ನೆಪತ್ರಿಕೆಗೆ 40 ನಿಮಿಷಗಳು, ಒಂದೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 30 ನಿಮಿಷಗಳನ್ನು ನೀಡಲಾಗುವುದು.

5. ಪ್ರಥಮ ಭಾಷಾ ವಿಷಯಗಳು, ಕೋರ್ ವಿಷಯಗಳು ಮತ್ತು ಜೆ.ಟಿ.ಎಸ್. ವಿಷಯಗಳಿಗೆ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.15 ರವರೆಗೆ ಮತ್ತು ದ್ವಿತೀಯ ಭಾಷಾ ವಿಷಯಗಳು ಹಾಗೂ ತೃತೀಯ ಭಾಷಾ ವಿಷಯಗಳಿಗೆ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00ರವರೆಗೆ ಅವಧಿ ನಿಗದಿಪಡಿಸಿದೆ.

6. ಪ್ರಥಮ ಭಾಷಾ ವಿಷಯಗಳು, ಕೋರ್ ವಿಷಯಗಳು ಮತ್ತು ಜೆ.ಟಿ.ಎಸ್. ವಿಷಯಗಳ ಪರೀಕ್ಷೆ ಬರೆಯಲು 3.00 ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

7. ಎನ್.ಎಸ್.ಕ್ಯೂ.ಎಫ್. ವಿಷಯಗಳ ಪರೀಕ್ಷೆ ಬೆಳಗ್ಗೆ 10.00 ರಿಂದ 12.15ರವರೆಗೆ ನಡೆಯಲಿದೆ.

8. ಎನ್.ಎಸ್.ಕ್ಯೂ.ಎಫ್. ಪರೀಕ್ಷಾ ವಿಷಯಗಳ ಪರೀಕ್ಷೆ ಬರೆಯಲು 2.00 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

ಉಚಿತ ಬಸ್

ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

SSLC ಪರೀಕ್ಷೆ-1 ರ ವೇಳಾಪಟ್ಟಿ

BIG NEWS: ‘SSLC’ exams to begin across the state from March 21: Here is information about the rules students must follow
Share. Facebook Twitter LinkedIn WhatsApp Email

Related Posts

‘ಮಾಜಿ ದೇವದಾಸಿ ಮಹಿಳೆ’ಯರ ‘ಮರು ಸಮೀಕ್ಷಾ ವರದಿ’ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

10/02/2026 5:59 PM3 Mins Read

ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್‍.ಡಿ

10/02/2026 5:23 PM1 Min Read

ಸಾಗರದಲ್ಲಿ ಅರಣ್ಯ ಜಮೀನು ತೆರವು ನೋಟೀಸ್: ತಮ್ಮದೇ ಸರ್ಕಾರದ ವಿರುದ್ದ ಕೆಡಿಪಿ ಸದಸ್ಯ ಅಸಮಾಧಾನ

10/02/2026 5:11 PM3 Mins Read
Recent News

BREAKING : ‘AI ರಚಿತ’ ವಿಷಯಗಳಿಗೆ ‘ಲೇಬಲ್’ ಕಡ್ಡಾಯ ; ಸೋಷಿಯಲ್ ಮೀಡಿಯಾಗಳಿಗೆ ಕೇಂದ್ರ ಸರ್ಕಾರ ಆದೇಶ!

10/02/2026 6:15 PM

BREAKING: ಅವಿಶ್ವಾಸ ನಿರ್ಣಯದವರೆಗೆ ಸ್ಪೀಕರ್ ಪೀಠದಲ್ಲಿ ಕೂರದಿರಲು ಓಂ ಬಿರ್ಲಾ ನಿರ್ಧಾರ

10/02/2026 6:07 PM

‘ಮಾಜಿ ದೇವದಾಸಿ ಮಹಿಳೆ’ಯರ ‘ಮರು ಸಮೀಕ್ಷಾ ವರದಿ’ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

10/02/2026 5:59 PM

BREAKING: ‘ಸೋಷಿಯಲ್ ಮೀಡಿಯಾ’ಗಳ ಹಾನಿಕಾರಕ ‘ಪೋಸ್ಟ್‌’ಗಳನ್ನು 3 ಗಂಟೆಗಳಲ್ಲಿ ತೆಗೆದುಹಾಕಬೇಕು: ಕೇಂದ್ರ ಸರ್ಕಾರ ಆದೇಶ

10/02/2026 5:30 PM
State News
KARNATAKA

‘ಮಾಜಿ ದೇವದಾಸಿ ಮಹಿಳೆ’ಯರ ‘ಮರು ಸಮೀಕ್ಷಾ ವರದಿ’ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

By kannadanewsnow0910/02/2026 5:59 PM KARNATAKA 3 Mins Read

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ…

ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್‍.ಡಿ

10/02/2026 5:23 PM

ಸಾಗರದಲ್ಲಿ ಅರಣ್ಯ ಜಮೀನು ತೆರವು ನೋಟೀಸ್: ತಮ್ಮದೇ ಸರ್ಕಾರದ ವಿರುದ್ದ ಕೆಡಿಪಿ ಸದಸ್ಯ ಅಸಮಾಧಾನ

10/02/2026 5:11 PM

ವೀರ ಕಂಬಳಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!

10/02/2026 5:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.