ಬೆಂಗಳೂರು : ಎಸ್ಎಸ್ಎಲ್ ಸಿ ಮುಖ್ಯ ಪರೀಕ್ಷೆ ನಡೆಸುವ ರೀತಿಯಲ್ಲೇ ಶಿಸ್ತುಬದ್ಧವಾಗಿ ಹಾಗೂ ಪಾರದರ್ಶಕವಾಗಿ ಪೂರ್ವಸಿದ್ಧತಾ ಪರೀಕ್ಷೆ ನಡೆಸಬೇಕೆಂದು ಶಿಕ್ಷಕರು ಹಾಗೂ ಅಧಿಕಾರಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಸೂಚನೆ ನೀಡಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಕುರಿತು ಮಾರ್ಗಸೂಚಿ ಹೊರಡಿಸಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ, ನಕಲು ಮಾಡುವುದು, ವಾಟ್ಸಪ್ ಸೇರಿ ಜಾಲತಾಣಗಳಲ್ಲಿ ಪತ್ರಿಕೆಯನ್ನು ಹಂಚುವುದು, ಪರೀಕ್ಷಾ ಕೇಂದ್ರಕ್ಕೆ ಚೀಟಿಗಳನ್ನು ಹಂಚುವುದು ಸೇರಿ ಯಾವುದೇ ರೀತಿಯ ಅಕ್ರಮ ನಡೆಸಿದರೆ ಅವರ ವಿರುದ್ಧ ಕರ್ನಾಟಕ ಶಿಕ್ಷಣ ಕಾಯ್ದೆ ಅನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಹೀಗಿದೆ SSLC ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ