ಬೆಂಗಳೂರು : ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ-ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ 1ರ ಕೆಲ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಜ.19ರಿಂದ ಆರಂಭವಾಗಲಿರುವ ಪೂರ್ವ ಸಿದ್ಧತಾ ಪರೀಕ್ಷೆ 2ರಲ್ಲಿ ನೋಡಲ್ ಕೇಂದ್ರದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಆ ಕೇಂದ್ರದ ಪ್ರಾಂಶುಪಾಲರ ಮೇಲೆ ಎಫ್ ಐಆರ್ು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ(ಪದವಿ ಪೂರ್ವ) ಎಚ್ಚರಿಕೆ ನೀಡಿದೆ.
ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಗಳನ್ನು ವಾಟ್ಸ್ಅಪ್ / ಯೂಟ್ಯೂಬ್ / ಇನ್ ಸ್ಟಾಗ್ರಾಂ ಅಥವಾ ಇನ್ಯಾವುದೇ ಮಾಧ್ಯಮ ದಲ್ಲಿ ಬಹಿರಂಗ, ಪ್ರಸಾರ ಮಾಡಿದಲ್ಲಿ ವಿದ್ಯಾರ್ಥಿಗಳ ಮೇಲೂ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಅನುದಾನಿತ ಕಾಲೇಜುಗಳು ಪ್ರಶ್ನೆ ಪತ್ರಿಕೆ ಬಹಿರಂಗಕ್ಕೆ ಕಾರಣವಾದರೆ ಕಾಲೇಜಿನ ಅನುದಾನ ಹಿಂಪಡೆಯಲು, ಪ್ರಶ್ನೆ ಪತ್ರಿಕೆ ಸೋರಿಕೆ ಪರೀಕ್ಷಾ ಕೇಂದ್ರದಲ್ಲಿ ನಡೆದರೆ ಅಂಥ ಕೇಂದ್ರವನ್ನೇ ರದ್ದುಮಾಡಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಇಲಾಖೆ ನಿರ್ದೇಶಕರು ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.








