ಮಂಡ್ಯ : ಸಚಿವ ಸಂಪುಟದ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದು, ಸಚಿವ ಸಂಪುಟ ಬಗ್ಗೆ ಯಾರು ಹೇಳುತ್ತಾರೆ ಅನ್ನೋದು ಮುಖ್ಯ ಅಲ್ಲ. ಹೈಕಮಾಂಡ್ ಅದಕ್ಕೆ ಸೂಚನೆ ನೀಡಬೇಕು.ಬಳಿಕ ನಾನು ನಿರ್ಧರಿಸುತ್ತೇನೆ ಹೈಕಮಾಂಡ್ ಹೇಳಿಲ್ಲ ನಾನು ತೀರ್ಮಾನವನ್ನು ತೆಗೆದುಕೊಂಡಿಲ್ಲ. ಹಾಗಾಗಿ ಸಚಿವ ಸಂಪುಟ ಪುನಾರಚನೆ ಸದ್ಯಕ್ಕೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಬಂಡಬೋಯಿನಹಳ್ಳಿ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ED ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಾಳೆ ಹೈ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಒಂದಿನ ಮುಂಚಿತವಾಗಿ ಲೋಕಾಯುಕ್ತಕ್ಕೆ ಪತ್ರ ಬರೆದಿದ್ದರ ಉದ್ದೇಶವೇನು? ED ಅಧಿಕಾರಿಗಳು ದುರುದ್ದೇಶ ಪೂರಕವಾಗಿ ತನಿಖೆ ನಡೆಸುತ್ತಿದ್ದಾರೆ. ಆದರೆ ಅವರಿಗೆ ತನಿಖೆ ಮಾಡುವ ಅಧಿಕಾರವೇ ಇಲ್ಲ ಎಂದು ಕಿಡಿಕಾರಿದರು.