ಮಂಡ್ಯ : ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹೆಚ್.ಎಲ್.ನಾಗರಾಜ್ ಅವರ ಸ್ಥಾನಕ್ಕೆ ಬಿ.ಸಿ.ಶಿವಾನಂದಮೂರ್ತಿ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಜಂಟಿ ಆಯುಕ್ತರಾಗಿದ್ದ ಶಿವಾನಂದ ಮೂರ್ತಿಯವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಡಾ. ಹೆಚ್ ಎಲ್ ನಾಗರಾಜ್ ಅವರ ಜಾಗಕ್ಕೆ ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಹೆಚ್ ಆದೇಶ ಹೊರಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿದ್ದ ಡಾ.ಹೆಚ್.ಎಲ್.ನಾಗರಾಜು ಅವರು ಸನ್ಯಾಸತ್ವ ಸ್ವೀಕಾರ ಮಾಡುವುದು ಖಚಿತವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಂಡ್ಯ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯನ್ನಾಗಿ ಕೆ.ಎ.ಎಸ್ ಅಧಿಕಾರಿ ಬಿ.ಸಿ ಶಿವಾನಂದಮೂರ್ತಿ ಅವರನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ.