Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕಕ್ಕೆ ಬಿಗ್ ಶಾಕ್: ಇರಾನ್ ದಾಳಿಗೆ ತತ್ತರಿಸಿದ ಸೌದಿ ವಾಯುನೆಲೆ; $300 ಮಿಲಿಯನ್ ಬೆಲೆಯ ‘E-3 ಸೆಂಟ್ರಿ’ ವಿಮಾನ ಭಸ್ಮ!

30/03/2026 6:57 AM

ಟ್ರಂಪ್ ನೀತಿ ಹಾಗೂ ಇರಾನ್ ಯುದ್ಧದ ವಿರುದ್ಧ ಜಾಗತಿಕ ಆಕ್ರೋಶ: ಅಮೆರಿಕ, ಯುರೋಪ್‌ನಲ್ಲಿ ಬೀದಿಗಿಳಿದ ಲಕ್ಷಾಂತರ ಜನ!

30/03/2026 6:51 AM

ALERT : ನಿಮ್ಮ ದೇಹದ ಮೇಲೆ`ಕೊಬ್ಬಿನ ಗಡ್ಡೆ’ ಇದೆಯಾ? ಹೀಗಿದೆ ಚಿಕಿತ್ಸಾ ವಿಧಾನ

30/03/2026 6:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 200 ಎಕರೆಯಲ್ಲಿ ಸೆಮಿಕಂಡಕ್ಟರ್ ಪಾರ್ಕ್ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಿರ್ಧಾರ : ಸಚಿವ ಎಂ.ಬಿ ಪಾಟೀಲ್
KARNATAKA

BIG NEWS : 200 ಎಕರೆಯಲ್ಲಿ ಸೆಮಿಕಂಡಕ್ಟರ್ ಪಾರ್ಕ್ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಿರ್ಧಾರ : ಸಚಿವ ಎಂ.ಬಿ ಪಾಟೀಲ್

By kannadanewsnow0518/11/2025 11:59 AM

ಬೆಂಗಳೂರು: ಆಧುನಿಕ ಬಗೆಯ ಕೈಗಾರಿಕೋದ್ಯಮಗಳ ಮಹತ್ತ್ವವನ್ನು ಅರಿತಿರುವ ರಾಜ್ಯ ಸರಕಾರವು 200 ಎಕರೆ ಜಾಗದಲ್ಲಿ ಸೆಮಿಕಂಡಕ್ಟರ್ ಪಾರ್ಕ್ ಅಭಿವೃದ್ಧಿಪಡಿಸಲಿದೆ. ಇಲ್ಲಿ ಈ ತರಹದ ಕಂಪನಿಗಳಿಗೆ ಬೇಕಾಗುವ ಸಕಲ ಸೌಕರ್ಯಗಳನ್ನೂ ಕಲ್ಪಿಸಲಾಗುವುದು. ಇದು ದೇಶ ಮತ್ತು ರಾಜ್ಯ ಮಟ್ಟದಲ್ಲಿ ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ನಾವೀನ್ಯತಾ ಕೇಂದ್ರವಾಗಿ ಕೆಲಸ ಮಾಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಮಂಗಳವಾರ ಇಲ್ಲಿನ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆರಂಭವಾದ ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯು ಮುಂಚೂಣಿ ತಂತ್ರಜ್ಞಾನ ಕಂಪನಿಗಳಿಂದ ಮತ್ತು ಪ್ರಮುಖ ಆ್ಯಂಕರ್ ಹೂಡಿಕೆದಾರರಿಂದ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಆದ್ಯತೆ ನೀಡಿದೆ. ಇಂತಹ ಹೂಡಿಕೆಯು ಕೈಗಾರಿಕೋದ್ಯಮದ ವಿವಿಧ ವಲಯಗಳಿಗೆ ಹರಿದು ಬರಬೇಕು ಎನ್ನುವುದು ಸರಕಾರದ ಗುರಿಯಾಗಿದೆ. ಇಂತಹ ವಲಯಗಳಲ್ಲಿ ಡ್ರೋನ್, ಸೆಮಿಕಂಡಕ್ಟರ್ ಸಾಧನಗಳು ಮತ್ತು ಸೌರ ವಿದ್ಯುತ್ ಎಲ್ಲವನ್ನೂ ಪರಿಗಣಿಸಲಾಗಿದೆ. ಇದರ ಜೊತೆಯಲ್ಲಿ ಇಂಡಸ್ಟ್ರಿ 5.0 ಮತ್ತು ಇನ್ನಿತರ ಅತ್ಯಾಧುನಿಕ ಕೈಗಾರಿಕಾ ವಿಧಾನಗಳನ್ನೂ ಗಂಭೀರವಾಗಿ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೈಗಾರಿಕೆಗಳು ಬೆಳೆಯಬೇಕು ಮತ್ತು ಹೂಡಿಕೆದಾರರು ನಮ್ಮಲ್ಲಿಗೆ ಬರಬೇಕೆಂದರೆ, ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯಪರಿಸರ ಚೆನ್ನಾಗಿರಬೇಕು. ನಮ್ಮಲ್ಲಿ 800ಕ್ಕೂ ಹೆಚ್ಚು ಆರ್ & ಡಿ ಕೇಂದ್ರಗಳು, 100ಕ್ಕೂ ಅಧಿಕ ಚಿಪ್ ವಿನ್ಯಾಸ ಕಂಪನಿಗಳು ಮತ್ತು 18,300 ನವೋದ್ಯಮಗಳು ಇವೆ. ನಮ್ಮಲ್ಲಿರುವ ಆರ್ ಮತ್ತು ಡಿ ಕೇಂದ್ರಗಳು ಕೃತಕ ಬುದ್ಧಿಮತ್ತೆ, ಡೀಪ್ ಟೆಕ್, ಕ್ವಾಂಟಂ ಕಂಪ್ಯೂಟಿಂಗ್, ಸ್ಪೇಸ್-ಟೆಕ್ ಮುಂತಾದ ಅತ್ಯಾಧುನಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿವೆ. ಉದ್ದೇಶಿತ ಕ್ವಿನ್ ಸಿಟಿಗೆ ಕೊಟ್ಟಿರುವ 5,000 ಎಕರೆ ಜಾಗದಲ್ಲಿ ಆರ್ ಮತ್ತು ಡಿ ಕೇಂದ್ರಗಳಿಗಾಗಿ ಅಗತ್ಯವಿರುವಷ್ಟು ಸ್ಥಳವನ್ನು ಮೀಸಲಿಟ್ಟು, ಅದಕ್ಕೆ ತಕ್ಕ ಕಾರ್ಯಪರಿಸರ ಅಭಿವೃದ್ಧಿ ಪಡಿಸಲಿದ್ದೇವೆ ಎಂದು ಅವರು ವಿವರಿಸಿದ್ದಾರೆ.

ರಾಜ್ಯದಲ್ಲಿ ಹಲವು ತಂತ್ರಜ್ಞಾನ ಕಂಪನಿಗಳು ಎಐ, ಎಂಎಲ್ (ಮಷೀನ್ ಲರ್ನಿಂಗ್), ಕ್ವಾಂಟಂ, ರೋಬೋಟಿಕ್ಸ್, ಆಧುನಿಕ ತಯಾರಿಕೆ ಮತ್ತು ಸುಸ್ಥಿರ ನಾವೀನ್ಯತೆಯ ಕ್ಷೇತ್ರಗಳಲ್ಲಿ ಸಕ್ರಿಯವಾಗಿವೆ. ಇಂತಹ ಕಂಪನಿಗಳಿಗೆ ಬೆಂಬಲ ಕೊಡಲೆಂದೇ ಸರಕಾರವು 600 ಕೋಟಿ ರೂ.ಗಳನ್ನು ಒದಗಿಸಿದೆ. ರಾಜ್ಯವು ಡೀಪ್ ಸೈನ್ಸ್ ಮತ್ತು ಮುಂಚೂಣಿ ತಂತ್ರಜ್ಞಾನ ಎರಡರಲ್ಲೂ ಅಗ್ರಸ್ಥಾನದಲ್ಲಿ ಇರಬೇಕೆನ್ನುವುದು ಸರಕಾರದ ಸಂಕಲ್ಪವಾಗಿದೆ. ಇದಕ್ಕೆ ಪೂರಕವಾಗಿ ಇತ್ತೀಚೆಗೆ ಧಾರವಾಡದಲ್ಲಿ ಎಐ ಮತ್ತು ಕ್ವಾಂಟಂ ಕಂಪ್ಯೂಟಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಉತ್ಕೃಷ್ಟತಾ ಕೇಂದ್ರವನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ಇನ್ನೊಂದೆಡೆಯಲ್ಲಿ ಜೈವಿಕ ತಂತ್ರಜ್ಞಾನ, ಸೈಬರ್ ಸೆಕ್ಯುರಿಟಿ ತರಹದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕೈಗಾರಿಕೆಗಳು ಶಿಕ್ಷಣ ಸಂಸ್ಥೆಗಳೊಂದಿಗೆ ಕೈಜೋಡಿಸಿವೆ ಎಂದು ಪಾಟೀಲ ನುಡಿದಿದ್ದಾರೆ.

ರಾಜ್ಯವು ಇ.ಎಸ್.ಡಿ.ಎಂ., ಸಂಚಾರ ವ್ಯವಸ್ಥೆ, ಜೈವಿಕ ತಂತ್ರಜ್ಞಾನ ಮತ್ತು ನವೋದ್ಯಮ ಪರಿಪೋಷಣೆಗೆ ಸಂಬಂಧಿಸಿದಂತೆ ಪುರೋಗಾಮಿ ನೀತಿಗಳನ್ನು ಹೊಂದಿದೆ. ಇದಲ್ಲದೆ ಜಪಾನ್, ಅಮೆರಿಕ, ಜರ್ಮನಿ ಮತ್ತು ಸಿಂಗಪುರದಂತಹ ರಾಷ್ಟ್ರಗಳೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

ALERT : ನಿಮ್ಮ ದೇಹದ ಮೇಲೆ`ಕೊಬ್ಬಿನ ಗಡ್ಡೆ’ ಇದೆಯಾ? ಹೀಗಿದೆ ಚಿಕಿತ್ಸಾ ವಿಧಾನ

30/03/2026 6:45 AM2 Mins Read

ಹಳ್ಳಿ ಜನರಿಗೆ ಇನ್ಮುಂದೆ 45 ದಿನಕ್ಕೊಮ್ಮೆ ಮಾತ್ರ ಗ್ಯಾಸ್ ಸಿಲಿಂಡರ್ : ಹೊಸ ನಿಯಮದ ಬಗ್ಗೆ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ

30/03/2026 6:27 AM1 Min Read

ರಾಜ್ಯದ `SSLC’ ಗಣಿತ ಪರೀಕ್ಷೆಯಲ್ಲಿ `ವಾಟರ್ ಮಾರ್ಕ್’ ದೋಷ : ಉತ್ತರಿಸಲು ವಿದ್ಯಾರ್ಥಿಗಳ ಪರದಾಟ !

30/03/2026 6:05 AM1 Min Read
Recent News

ಅಮೆರಿಕಕ್ಕೆ ಬಿಗ್ ಶಾಕ್: ಇರಾನ್ ದಾಳಿಗೆ ತತ್ತರಿಸಿದ ಸೌದಿ ವಾಯುನೆಲೆ; $300 ಮಿಲಿಯನ್ ಬೆಲೆಯ ‘E-3 ಸೆಂಟ್ರಿ’ ವಿಮಾನ ಭಸ್ಮ!

30/03/2026 6:57 AM

ಟ್ರಂಪ್ ನೀತಿ ಹಾಗೂ ಇರಾನ್ ಯುದ್ಧದ ವಿರುದ್ಧ ಜಾಗತಿಕ ಆಕ್ರೋಶ: ಅಮೆರಿಕ, ಯುರೋಪ್‌ನಲ್ಲಿ ಬೀದಿಗಿಳಿದ ಲಕ್ಷಾಂತರ ಜನ!

30/03/2026 6:51 AM

ALERT : ನಿಮ್ಮ ದೇಹದ ಮೇಲೆ`ಕೊಬ್ಬಿನ ಗಡ್ಡೆ’ ಇದೆಯಾ? ಹೀಗಿದೆ ಚಿಕಿತ್ಸಾ ವಿಧಾನ

30/03/2026 6:45 AM

ವಿಮಾನ ಪ್ರಯಾಣಿಕರಿಗೆ ಭರ್ಜರಿ ಸಿಹಿ ಸುದ್ದಿ: ಏಪ್ರಿಲ್ 20ರಿಂದ ಶೇ. 60ರಷ್ಟು ಸೀಟುಗಳ ಹಂಚಿಕೆ ಉಚಿತ!

30/03/2026 6:44 AM
State News
KARNATAKA

ALERT : ನಿಮ್ಮ ದೇಹದ ಮೇಲೆ`ಕೊಬ್ಬಿನ ಗಡ್ಡೆ’ ಇದೆಯಾ? ಹೀಗಿದೆ ಚಿಕಿತ್ಸಾ ವಿಧಾನ

By kannadanewsnow5730/03/2026 6:45 AM KARNATAKA 2 Mins Read

ಇತ್ತೀಚಿನ ದಿನಗಳಲ್ಲಿ ಅನೇಕರಲ್ಲಿ ಚರ್ಮದ ಅಡಿಯಲ್ಲಿ ಸಣ್ಣ ಸಣ್ಣ ಗಡ್ಡೆಗಳು ಕಾಣಿಸಿಕೊಳ್ಳುವುದನ್ನು ನಾವು ಗಮನಿಸಿರುತ್ತೇವೆ. ಇದನ್ನು ವೈದ್ಯಕೀಯ ಭಾಷೆಯಲ್ಲಿ ‘ಲಿಪೋಮಾ’…

ಹಳ್ಳಿ ಜನರಿಗೆ ಇನ್ಮುಂದೆ 45 ದಿನಕ್ಕೊಮ್ಮೆ ಮಾತ್ರ ಗ್ಯಾಸ್ ಸಿಲಿಂಡರ್ : ಹೊಸ ನಿಯಮದ ಬಗ್ಗೆ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ

30/03/2026 6:27 AM

ರಾಜ್ಯದ `SSLC’ ಗಣಿತ ಪರೀಕ್ಷೆಯಲ್ಲಿ `ವಾಟರ್ ಮಾರ್ಕ್’ ದೋಷ : ಉತ್ತರಿಸಲು ವಿದ್ಯಾರ್ಥಿಗಳ ಪರದಾಟ !

30/03/2026 6:05 AM

BIG NEWS : ಜಮೀನಿಗೆ ಹೋಗುವ `ಕಾಲುದಾರಿ, ಬಂಡಿದಾರಿ’ ಮುಚ್ಚಿದರೆ ಅಪರಾಧ : ತಹಶೀಲ್ದಾರ್‌ಗೆ ದೂರು ನೀಡಲು ಅವಕಾಶ !

30/03/2026 5:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.