ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ರೂಪಿಸಲಾಗಿದೆ. ಈ ಆರೋಗ್ಯ ಸಂಜೀವಿನಿ ಯೋಜನೆಯ ಅನುಷ್ಠಾನ ಸಂಬಂಧಿಸಿದಂತೆ ಪರಿಷ್ಕೃತ ಸೂಚನೆಯನ್ನು ಸರ್ಕಾರ ಹೊರಡಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ವಿಶೇಷ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS) ಅನುಷ್ಠಾನಗೊಳಿಸಲು ಮೇಲೆ ಕ್ರ.ಸಂ.(1) ರಿಂದ (3) ರಲ್ಲಿ ಓದಲಾದ ಸರ್ಕಾರದ ಆದೇಶಗಳಲ್ಲಿ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ ಎಂದಿದ್ದಾರೆ.
ಮುಂದುವರೆದು, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS) ಸಮರ್ಪಕವಾಗಿ ಅನುಷ್ಠಾನಗೊಳಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ ಮತ್ತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ನೊಂದಿಗೆ ಚರ್ಚಿಸಿ, ಈ ಹಿಂದೆ ರೂಪಿಸಿರುವ ಯೋಜನೆಯಲ್ಲಿ ಕೆಲವು ಸೂಚನೆಗಳನ್ನು ಮಾರ್ಪಡಿಸುವುದು ಸೂಕ್ತವೆಂದು ತೀರ್ಮಾನಿಸಲಾಗಿದೆ. ಯೋಜನೆಗೆ ಸಂಬಂಧಿಸಿದಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೇಲೆ ಓದಲಾದ (4) ರ ಪತ್ರಗಳಲ್ಲಿ ಸರ್ಕಾರಕ್ಕೆ ಪರಿಷ್ಕೃತ ಒಡಂಬಡಿಕೆಯನ್ನು ಸಿದ್ಧಪಡಿಸಿ ಸಲ್ಲಿಸಿರುತ್ತದೆ ಮೇಲೆ ಕ್ರ.ಸಂ. (5) ರಲ್ಲಿ ಓದಲಾದ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ: 04.03.2025 ಮತ್ತು ದಿನಾಂಕ: 13.01.2025 ರಂದು ನಡೆದ ಸಭೆಗಳಲ್ಲಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕೆಲವು ಅಂಶಗಳ ಬಗ್ಗೆ ಸೂಚನೆಗಳನ್ನು ನೀಡಲಾಗಿದೆ ಹಾಗೂ ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.
ದಿನಾಂಕ: 13.01.2025 ರಂದು ನಡೆದ ಸಭೆಯ ತೀರ್ಮಾನದಂತೆ ಮೇಲೆ ಕ್ರ.ಸಂ. (6) ರಲ್ಲಿ ಓದಲಾದ, ಪ್ರಧಾನ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರಿಂದ (ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಏಕಕಡತದಲ್ಲಿ) ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಪ್ಯಾಕೇಜ್ ದರಗಳು, ನಿಗದಿಪಡಿಸಿರದ ಚಿಕಿತ್ಸಾ ವಿಧಾನಗಳು (Unspecified procedures), ಇಂಪ್ಲಾಂಟ್ ದರಗಳು, ಆಸ್ಪತ್ರೆಗಳ ನೋಂದಾವಣೆ, ಒಡಂಬಡಿಕೆಯ ಷರತ್ತುಗಳು ಹಾಗೂ ಇತರೆ ಕೆಲವು ಅಂಶಗಳಿಗೆ ಸಂಬಂಧಿಸಿದಂತೆ ಪರಿಷ್ಕೃತ ಪುಸ್ತಾವನೆಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಸ್ವೀಕೃತವಾಗಿದೆ.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿಂದ ಸ್ವೀಕೃತವಾದ ಪರಿಷ್ಕೃತ ಪ್ರಸ್ತಾವನೆಯಲ್ಲಿ ಈ ಕೆಳಕಂಡ ಪ್ರಮುಖ ಅಂಶಗಳನ್ನು ಪ್ರಸ್ತಾಪಿಸಲಾಗಿದೆ:-
1) ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯು ಪ್ಯಾಕೇಜ್ ದರಗಳನ್ನು ಆಧರಿಸಿದೆ. KASS ಯೋಜನೆಯಡಿ ఒట్టు 2000 ವೈದ್ಯಕೀಯ ಕಾರ್ಯವಿಧಾನಗಳನ್ನು ಅಳವಡಿಸಿಕೊಳ್ಳಲು ಪ್ರಸ್ತಾಪಿಸಲಾಗಿದೆ. ಈ ಕಾರ್ಯವಿಧಾನಗಳನ್ನು CGHS, HBP 2022 ಮತ್ತು ಪ್ರಸ್ತುತ AB-ArK ಪ್ಯಾಕೇಜ್‌ಗಳಲ್ಲಿ ಲಭ್ಯವಿರುವ ಪ್ಯಾಕೇಜ್‌ಗಳಿಂದ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
KASS PACKAGE MASTER: ಯೋಜನೆಯ ಆರಂಭದ ಹಂತದಲ್ಲಿ ಈ ಕೆಳಕಂಡಂತೆ CGHS, AB-ARK, National Health Authority (NHA) 20 HBP 2022 da ಒಳಗೊಂಡ ಸಮ್ಮಿಶ್ರ ವೈದ್ಯಕೀಯ ಚಿಕಿತ್ಸಾ ವಿಧಾನಗಳು ಹಾಗೂ ದರಗಳನ್ನು ಒಳಗೊಂಡಿರುತ್ತವೆ ಎಂದು ತಿಳಿಸಿದ್ದಾರೆ.