ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳ ಸೇವಾ ವಿವರಗಳನ್ನು ಹೆಚ್.ಆರ್.ಎಂ.ಎಸ್ ತಂತ್ರಾಂಶದ ವಿದ್ಯುನ್ಮಾನ ಸೇವಾ ವಹಿಯ (Electronic Service Register-ESR) ಸ್ವರೂಪದಲ್ಲಿ ದಾಖಲಿಸಿ ನಿರ್ವಹಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸೇವೆಯಲ್ಲಿರುವ ಎಲ್ಲಾ Group B (Non Gazetted)/Group C/Group D ಅಧಿಕಾರಿ/ಸಿಬ್ಬಂದಿಗಳ ಸೇವಾ ವಹಿಯನ್ನು ಹೆಚ್.ಆರ್.ಎಂ.ಎಸ್-2 ಯೋಜನೆಯ ಭಾಗವಾಗಿರುವ ವಿದ್ಯುನ್ಮಾನ ಸೇವಾ ವಹಿಯ (Electronic Service Register-ESR) ನಲ್ಲಿಯೇ ಅನುಷ್ಠಾನಗೊಳಿಸಲು ನಿರ್ದೇಶನ ನೀಡಲಾಗಿದೆ.
ಹೆಚ್.ಆರ್.ಎಂ.ಎಸ್-2.0 ರಲ್ಲಿ ಅನುಷ್ಠಾನಗೊಳಿಸುವ ಸಂಬಂಧ, ವಿದ್ಯುನ್ಮಾನ ಸೇವಾ ವಹಿಯನ್ನು ಸಿದ್ಧಪಡಿಸಲಾಗಿದೆ. ಈ ತಂತ್ರಾಂಶವು ನೌಕರಸ್ನೇಹಿಯಾಗಿದೆ. ನಿರ್ವಹಣೆಯೂ ಬಹಳ ಸರಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸೇವೆಗೆ ನೇಮಕಗೊಂಡಿರುವ ಎಲ್ಲಾ ಅಧಿಕಾರಿ/ನೌಕರರ ಸೇವಾ ವಿವರಗಳ ಮಾಹಿತಿಯು ಈಗಾಗಲೇ ಹೆಚ್.ಆರ್.ಎಂ.ಎಸ್-1.0 ತಂತ್ರಾಂಶದಲ್ಲಿ ಲಭ್ಯವಿದ್ದು, ಸದರಿ ಮಾಹಿತಿಯನ್ನು ವಿದ್ಯುನ್ಮಾನ ಸೇವಾ ವಹಿಗೆ (ESR) ವರ್ಗಾಯಿಸಲು ಕೂಡ ಈ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ. ಎಲ್ಲಾ ಸಿಬ್ಬಂದಿಗಳ ಸೇವಾ ವಹಿಗಳನ್ನು ESR ಗೆ ಬದಲಾಯಿಸಿ ಮುಂದೆ ESR ನಲ್ಲಿಯೇ ಮುಂದುವರೆಸುವಂತೆ ತಿಳಿಸಲಾಗಿದೆ.
ಸದರಿ ಮಾಹಿತಿಯನ್ನು ವರ್ಗಾಯಿಸಿದ ನಂತರ ESR ನಲ್ಲಿ ಯಾವುದೇ ತಿದ್ದುಪಡಿ ಮಾಡುವ ಅವಕಾಶವಿಲ್ಲದಿರುವ ಕಾರಣ ಹೆಚ್.ಆರ್.ಎಂ.ಎಸ್-1.0 ತಂತ್ರಾಂಶದಲ್ಲಿ ಲಭ್ಯವಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಸರ್ಕಾರಿ ಅಧಿಕಾರಿ/ಸಿಬ್ಬಂದಿಗಳ ಸೇವಾ ವಹಿಯ ಪೂರ್ಣ ಮಾಹಿತಿಯನ್ನು ಕೂಡಲೇ ಪರಿಶೀಲಿಸಿ, ಅವಶ್ಯಕತೆ ಇದ್ದಲ್ಲಿ ಸರಿಪಡಿಸುವಂತೆ ಹಾಗೂ ಸೇರಿಸಲು ಸೂಚಿಸಲಾಗಿದೆ.
ಎಲ್ಲಾ ಸರ್ಕಾರಿ ಅಧಿಕಾರಿ/ಸಿಬ್ಬಂದಿಗಳ ಸೇವಾ ವಹಿಯ ಪೂರ್ಣ ಮಾಹಿತಿಯನ್ನು ESR ಗೆ ವರ್ಗಾಯಿಸುವ ಪೂರ್ಣ ಜವಾಬ್ದಾರಿಯು Drawing and Disbursing Officer ಆಗಿರುತ್ತದೆ. ESR ಸುಗಮ ಮತ್ತು ಪರಿಣಾಮಕಾರಿ ಅನುಷ್ಠಾನ ಉದ್ದೇಶಕ್ಕಾಗಿ ಎಲ್ಲಾ Drawing and Disbursing Officers ಅಧಿಕಾರಿಗಳಿಗೆ ಕೆಳಕಂಡಂತೆ ತರಬೇತಿಯನ್ನು ಆಯೋಜಿಸಲಾಗಿದೆ.