ಬೆಂಗಳೂರು : ದಿನಾಂಕ:01-04-2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳವಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲೆ ಓದಲಾದ ಕ್ರಮ ಸಂಖ್ಯೆ(1)ರಲ್ಲಿನ ಸರ್ಕಾರದ ಆದೇಶ ದಿನಾಂಕ:01/04/2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿದ್ದು, ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದನ ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿರುತ್ತದೆ. ಅದರಂತೆ ಈ ಆದೇಶದ ವ್ಯಾಪ್ತಿಗೊಳಪಡುವ ಸರ್ಕಾರಿ ನೌಕರರಿಂದ ದಿನಾಂಕ:30/06/2024 ರೊಳಗೆ ಅಭಿಮತವನ್ನು ಪಡೆದು ಕ್ರೂಡೀಕೃತ ಪ್ರಸ್ತಾವನೆಯನ್ನು ಸರ್ಕಾರದ ಪರಿಶೀಲನೆಗಾಗಿ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿರುತ್ತದೆ.
ಮೇಲೆ ಓದಲಾದ ಕ್ರಮ ಸಂಖ್ಯೆ (2) ರಲ್ಲಿನ ಸರ್ಕಾರದ ಆದೇಶದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಹಿಂದಿನ ಡಿಫೈನ್ಸ್ ಯೋಜನೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ನೌಕರರ ಎನ್‌ಪಿಎಸ್ ಪ್ರಾನ್ ಖಾತೆಯಲ್ಲಿನ ಸರ್ಕಾರದ ಹಾಗೂ ನೌಕರರ ವಂತಿಗೆಗಳನ್ನು ಹಿಂಪಡೆದು ಇತ್ಯರ್ಥಪಡಿಸಲು ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ.
ಅದರಂತೆ, ಮೇಲೆ ಓದಲಾದ ಕ್ರಮ ಸಂಖ್ಯೆ (3) ರಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಪ್ರಥಮ ದರ್ಜೆ ಸಹಾಯಕರು ಹಾಗೂ ದ್ವಿತೀಯ ದರ್ಜೆ ಸಹಾಯಕರುಗಳನ್ನು ಹಳೆಯ ಡಿಫೈನ್ಸ್ ಪಿಂಚಣಿಗೆ ಯೋಜನೆಗೆ ಒಳಪಡಿಸಿರುವಂತೆ ನೇಮಕಾತಿ ಪ್ರಾಧಿಕಾರವಾದ ಮುಖ್ಯ ಇಂಜಿನಿಯರ್, ಸಂಪರ್ಕ ಮತ್ತು ಕಟ್ಟಡ(ದ) ಬೆಂಗಳೂರು ಇವರು ನಮೂನೆ-1 ಮತ್ತು ನಮೂನೆ-2 ನ್ನು ಭರ್ತಿ ಮಾಡಿ ದಿನಾಂಕ:30/11/2024 ರಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ.
ಈ ಬಗ್ಗೆ ಪರಿಶೀಲಿಸಲಾಗಿ, ಮೇಲೆ ಓದಲಾದ ಕ್ರಮ ಸಂಖ್ಯೆ (4) ರ ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯ ನಾಗರೀಕ ಸೇವಾ (ಪರಿಶಿಷ್ಟ ಜಾತಿ ಪಂಗಡಕ್ಕೆ ಸೇರಿದ ವ್ಯಕ್ತಿಗಳಿಗೆ ಮೀಸಲಿರಿಸಿದ ತುಂಬದೇ ಇರುವ ಖಾಲಿ ಹುದ್ದೆಗಳ) (ವಿಶೇಷ ನೇಮಕಾತಿ) ನಿಯಮಗಳು 2001 ರ ಪ್ರಕಾರ ಲೋಕೋಪಯೋಗಿ ಇಲಾಖೆ ಮತ್ತು ಜಲ ಸಂಪನ್ಮೂಲ ಇಲಾಖೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದ ಗ್ರೂಪ್-ಸಿ ವೃಂದದ ದ್ವಿತೀಯ ದರ್ಜೆ ಸಹಾಯಕರು, ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ವಾಹನ ಚಾಲಕರು ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಲು 2:31/10/20020 ಆಹ್ವಾನಿಸಲಾಗಿರುತ್ತದೆ. ಅಧಿಸೂಚನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು
ಮೇಲೆ ಓದಲಾದ ಕ್ರಮ ಸಂಖ್ಯೆ (5) ರ ಅಧಿಸೂಚನೆಯಲ್ಲಿ ನೇಮಕಾತಿ ಆಯ್ಕೆ ಪ್ರಾಧಿಕಾರವಾದ ಮುಖ್ಯ ಇಂಜಿನಿಯರ್, ಸಂಪರ್ಕ ಮತ್ತು ಕಟ್ಟಡ(ದಕ್ಷಿಣ), ಬೆಂಗಳೂರು ರವರು ದಿನಾಂಕ:05/11/2008 ರಲ್ಲಿ ಹೆಚ್ಚುವರಿ/ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಸದರಿ ಜೇಷ್ಠತಾ ಪಟ್ಟಿಯಂತೆ ವಿವಿಧ ದಿನಾಂಕಗಳಂದು ಮುಖ್ಯ ಇಂಜಿನಿಯರ್, ಸಂಪರ್ಕ ಮತ್ತು ಕಟ್ಟಡ (ದ), ಬೆಂಗಳೂರು ರವರು ಈ ಕೆಳಕಂಡ ದ್ವಿತೀಯ ದರ್ಜೆ ಸಹಾಯಕರು ನೇಮಕಾತಿ ಆದೇಶವನ್ನು ನೀಡಲಾಗಿರುತ್ತದೆ.









