ಬೆಂಗಳೂರು : ರಾಜ್ಯದ 267 ವಕ್ಸ್ ಆಸ್ತಿಗಳ ಸಂರಕ್ಷಣೆ ಮತ್ತು ಅವುಗಳ ಅಭಿವೃದ್ಧಿಗಾಗಿ ₹22.87 ಕೋಟಿ ಅನುದಾನ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ. ಬೀದರ್‌ನಲ್ಲಿರುವ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗಾಗಿ ₹1 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. 267 ವಕ್ಸ್ ಆಸ್ತಿಗಳ ಸಂರಕ್ಷಣೆ ಮತ್ತು ಅವುಗಳ ಅಭಿವೃದ್ಧಿಗಾಗಿ ₹22.87 ಕೋಟಿ ಅನುದಾನ ನೀಡಲು ಒಪ್ಪಿಗೆ ನೀಡಲಾಗಿದೆ.
ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗಾಗಿ ₹231.81 ಕೋಟಿ ವೆಚ್ಚದಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ಕೆ.ಎಂ.ಡಿ.ಸಿ.ಯ ಮುಖಾಂತರ ಅನುಷ್ಠಾನ, ಜೆಇಇ/ನೀಟ್/ಸಿಇಟಿ ಪರೀಕ್ಷೆಗಳಿಗೆ 6,000 ಅಭ್ಯರ್ಥಿಗಳಿಗೆ ತರಬೇತಿ, ಗ್ರೂಪ್ – ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 500 ಅಭ್ಯರ್ಥಿಗಳಿಗೆ ತರಬೇತಿ ನೀಡಲು ನಿರ್ಧರಿಸಲಾಗಿದೆ.
100 ಸಂಖ್ಯಾಬಲವುಳ್ಳ 96 ಮೆಟ್ರಿಕ್ ನಂತರದ ಬಾಲಕ / ಬಾಲಕಿಯರ ವಿದ್ಯಾರ್ಥಿನಿಲಯಗಳು ಪ್ರಾರಂಭ, 50 ಹೊಸ ಮೌಲಾನಾ ಆಜಾದ್ ಶಾಲೆಗಳು ಆರಂಭ, 50 ಸಂಖ್ಯಾಬಲವುಳ್ಳ 25 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಪ್ರಾರಂಭ, 25 ಮೌಲಾನಾ ಆಜಾದ್ ಶಾಲೆಗಳಲ್ಲಿ ಪದವಿ ಪೂರ್ಣ ಶಿಕ್ಷಣ ಆರಂಭ, ₹2 ಕೋಟಿ ಅನುದಾನದಲ್ಲಿ ಸಿಖ್‌ಲಿಗಾರ್ ಸಮುದಾಯದವರ ಸಬಲೀಕರಣಕ್ಕಾಗಿ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ.
ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಆದ್ಯತೆ#GuaranteeSarkar #KarnatakaGovt pic.twitter.com/FLJTV4jM3b
— DIPR Karnataka (@KarnatakaVarthe) December 7, 2024