ಬೆಂಗಳೂರು : ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ವೃಂದದಿಂದ ಗ್ರೂಪ್-ಬಿ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡಿ ಕೌನ್ಸಲಿಂಗ್ ಮೂಲಕ ಸ್ಥಳನಿಯುಕ್ತಿಗೊಳಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ. ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ವೃಂದದಿಂದ ಗ್ರೂಪ್-ಬಿ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡುವ ಬಗ್ಗೆ ದಿನಾಂಕ 09-12-2025 ರಂದು ನಡೆಸಲಾದ ಇಲಾಖಾ ಮುಂಬಡ್ತಿ ಸಮಿತಿ ಸಭೆಯಲ್ಲಿನ ನಡಾವಳಿಯಂತೆ ಸ್ಥಾನಪನ್ನ ಬಡ್ತಿ ನೀಡಿ ಕೌನ್ಸಿಲಿಂಗ್ ಮೂಲಕ ಸ್ಥಳನಿಯುಕ್ತಿಗೊಳಿಸುವ ಸಂಬಂಧ ದಿನಾಂಕ 15-12-2025 ರಂದು ಅಪರ ಆಯುಕ್ತರ ಕಚೇರಿ ಆವರಣದಲ್ಲಿರುವ ಡಯಟ್ ಪ್ರಾರ್ಥನಾ ಮಂದಿರದಲ್ಲಿ ಮುಂಜಾನೆ 10-30 ಗಂಟೆಗೆ ಕೌನ್ಸಿಲಿಂಗ್ ಹಮ್ಮಿಕೊಳ್ಳಾಗಿದ್ದು, ಆ ಪ್ರಕಾರ ಬಡ್ತಿಗೆ ಅರ್ಹತೆ ಹೊಂದಿದ ಅರ್ಹತಾ ಪಟ್ಟಿಯಲ್ಲಿನ ಶಿಕ್ಷಕರುಗಳು ಕೌನ್ಸಿಲಿಂಗ್‌ಗೆ ಹಾಜರಾಗುವಂತೆ ತಿಳಿಸಲು ವಿಭಾಗದ ಎಲ್ಲಾ ಉಪನಿರ್ದೇಶಕರುಗಳಿಗೆ ಸೂಚಿಸಿದೆ.
ವಿಭಾಗದ ಎಲ್ಲಾ ಉಪನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ ರವರಿಗೆ ದಿನಾಂಕ 15-12-2025 ರಂದು ಮುಂಜಾನೆ 10-30 ಗಂಟೆಗೆ ಕೌನ್ಸಿಲಿಂಗ್ ಹಾಜರಾಗುವಂತೆ ಸಂಬಂಧಿಸಿದ ಪ್ರೌಢಶಾಲಾ ಶಿಕ್ಷಕರುಗಳಿಗೆ ತಿಳಿಸಲು ಕ್ರಮವಹಿಸುವಂತೆ ಸೂಚಿಸಿದೆ.









