ಬೆಂಗಳೂರು : 2023-24ನೇ ಸಾಲಿನಲ್ಲಿ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಬರಪೀಡಿತ ತಾಲ್ಲೂಕುಗಳಿಗೆ ತಾಲ್ಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಭಾರತ ಸರ್ಕಾರವು ಹೊರಡಿಸಿರುವ Drought Manual 2020 ರಲ್ಲಿನ ಮಾನದಂಡಗಳನ್ನು ಅನುಸರಿಸಿ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ, ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿದ್ದರ ಮೇರೆಗೆ, ಬರಪರಿಹಾರ ಕ್ರಮಗಳನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡಂತೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯನ್ನು ಸರ್ಕಾರದ ಆದೇಶ ಸಂಖ್ಯೆ: ಕಂಇ 449 ಟಿಎನ್‌ಆರ್ 2023, ದಿನಾಂಕ: 06.11.2023ರಲ್ಲಿ ರಚಿಸಲಾಗಿರುತ್ತದೆ.

ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಸಂಬಂಧ ಮಾದರಿ ಚುನಾವಣೆ ನೀತಿ ಸಂಹಿತಿಯು ದಿನಾಂಕ:16.03.2024 ರಿಂದ ಜಾರಿಗೆ ಬಂದಿರುತ್ತದೆ.

ಭಾರತದ ಚುನಾವಣಾ ಆಯೋಗವು ಮಾದರಿ ಚುನಾವಣೆ ನೀತಿ ಸಂಹಿತಿಯ ಸಂಬಂಧ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಕೆಳಕಂಡಂತೆ ನಿರ್ದೇಶಿಸಿರುತ್ತದೆ.

“1) No minister of the Government or a political functionary will be associated in the management of the drought relief operations in any capacity, supervisory or otherwise, during period of operation of the model code of conduct.

2) The entire relief operation would be taken up by the Division, District and Taluk/sub-District Administration without involving elected representatives and/or non-officials at any level.”

ಆದುದರಿಂದ, ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಮಾದರಿ ಚುನಾವಣೆ ನೀತಿ ಸಂಹಿತೆ ಮುಕ್ತಾಯವಾಗುವವರೆಗೂ, ದಿನಾಂಕ: 06.11.2023 ರ ಸರ್ಕಾರದ ಆದೇಶ ಸಂಖ್ಯೆ: ಕಂಇ 449 ಟಿಎನ್‌ಆರ್ 2023ರಲ್ಲಿ ವಿಧಿಸಿರುವ ಷರತ್ತು ಮತ್ತು ನಿಬಂಧನೆಗಳ ಪಾಲನೆಗೆ ಒಳಪಟ್ಟು, ಸಂಬಂಧಪಟ್ಟ ಉಪ ವಿಭಾಗದ ಉಪ ವಿಭಾಗಾಧಿಕಾರಿಗಳು ಸದರಿ ಸರ್ಕಾರಿ ಆದೇಶದಲ್ಲಿ ರಚಿಸಿರುವ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದೆ.

Share.
Exit mobile version