ಬೆಂಗಳೂರು : ದೇಶದಲ್ಲಿ ಇತ್ತಿಚ್ಚೆಗೆ ವೈದ್ಯರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಹಿಳಾ ವೈದ್ಯರ ರಕ್ಷಣೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ಆಸ್ಪತ್ರೆಗಳಲ್ಲಿ ಸಿಸಿಟಿವಿ ಹಾಗೂ ಭದ್ರತೆ ಹೆಚ್ಚಳ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ವೈದ್ಯಕೀಯ ಕಾಲೇಜುಗಳು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ನುರಿತ ಭದ್ರತಾ ಸಿಬ್ಬಂದಿ ನಿಯೋಜನೆ, ಸಿಸಿಟಿವಿ ಕ್ಯಾಮರಾಗಳ ಸಂಖ್ಯೆ ಹೆಚ್ಚಳ ಸೇರಿ ವಿವಿಧ ಕ್ರಮಗಳ ಮೂಲಕ ಮಹಿಳಾ ವೈದ್ಯರಿಗೆ ಅಗತ್ಯ ಸುರಕ್ಷತೆ ಒದಗಿಸಲಾಗುವುದು ಎಂದು ಹೇಳಿದ್ದಾರೆ.








