ಬೆಂಗಳೂರು: ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಂತ ಶಿಕ್ಷಕರ ಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿದೆ. 2024-25ನೇ ಸಾಲಿಗೆ 20 ಪ್ರಾಥಮಿಕ ಶಾಲಾ ಶಿಕ್ಷಕರಿಗೆ, 11 ಪ್ರೌಢ ಶಾಲಾ ಶಿಕ್ಷಕರಿಗೆ ಪ್ರಶಸ್ತಿಯನ್ನು ನೀಡಲಾಗಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ ಓರ್ವ ವಿಶೇಷ ಶಿಕ್ಷಕ ಒಳಗೊಂಡಂತೆ 11 ಶಿಕ್ಷಕರನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದೆ.
2024-25ನೇ ಸಾಲಿನ ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ ಸಾವಿತ್ರಿಬಾಯಿ ಪುಲೆ ಇವರ ಹೆಸರಿನಲ್ಲಿ ದಿನಾಂಕ 05-09-2024ರಂದು ನಡೆಯುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲು ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.
ಈ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರು/ಮುಖ್ಯ ಶಿಕ್ಷಕರು/ವಿಶೇಷ ಶಿಕ್ಷಕರುಗಳಿಗೆ ಸರ್ಕಾರದ ಆದೇಶ ಸಂಖ್ಯೆ:ಇಪಿ 308 ಪಿಬಿಎಸ್ 2021, ದಿನಾಂಕ: 12.09.2022 ರ ಅನುಸಾರ ತಲಾ ರೂ.25,000/- ರಂತೆ ಒಟ್ಟು 7,75,000/- ಗಳ ನಗದು ಪುರಸ್ಕಾರ ನೀಡಲು ಹಾಗೂ ಸದರಿ ವೆಚ್ಚವನ್ನು ರಾಜ್ಯ ಶಿಕ್ಷಣ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಬೆಂಗಳೂರು ಇಲ್ಲಿಂದ ಭರಿಸಲು ಅನುಮತಿ ನೀಡಿ ಆದೇಶಿಸಿದೆ. ಇವರಿಗೆ ಸೆಪ್ಟೆಂಬರ್.5ರಂದು ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸುವುದಾಗಿ ತಿಳಿಸಿದೆ.
ಇಲ್ಲಿದೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿ
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು