ಬೆಂಗಳೂರು : ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲಾ ಶಿಕ್ಷಣ ಇಲಾಖೆ ಯಿಂದ ಪ್ರದಾನ ಮಾಡಲಾಗುವ 2025-26ನೇ ಸಾಲಿನ ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಪ್ರಾಥಮಿಕ ಶಾಲಾ ವಿಭಾಗದ 20 ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರು ಸೇರಿ 31 ಶಿಕ್ಷಕರು ಆಯ್ಕೆಯಾಗಿ ದ್ದಾರೆ. ಪಿಯು ವಿಭಾಗದಲ್ಲಿ 10 ಉಪನ್ಯಾಸಕರು, ಪ್ರಾಂಶುಪಾಲರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಉತ್ತಮ ಶಿಕ್ಷಕರು ಪಟ್ಟಿಯಲ್ಲಿನ ಇಬ್ಬರು ಶಿಕ್ಷಕಿಯರಿಗೆ ‘ಸಾವಿತ್ರಿಬಾಯಿ ಪುಲೆ’ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು 25,000 ರು. ನಗದು ಮತ್ತು ಫಲಕ ಒಳಗೊಂಡಿದೆ. ಸೆ.5ರಂದು ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ನಲ್ಲಿ ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) 2025-26 ನೇ ಸಾಲಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ.
ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ “ಸಾವಿತ್ರಿಬಾಯಿ ಫುಲೆ” ಇವರ ಹೆಸರಿನಲ್ಲಿ ದಿನಾಂಕ:05.09.2025 ರಂದು ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲು ಅನುಮತಿ ನೀಡಲಾಗಿದೆ.