ಬೆಂಗಳೂರು : ನೋಂದಾಯಿತ ಕಾರ್ಮಿಕರ ಮೊದಲ ಮದುವೆ ಅಥವಾ ಕಾರ್ಮಿಕರ ಮಕ್ಕಳ ಮದುವೆಗೆ ಮಂಡಳಿಯಿಂದ ಸಹಾಯಧನ ಪಡೆಯಬಹುದು. ಫಲಾನುಭವಿಯು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ಸಹಾಯಧನ ಪಡೆಯಲು ಹೊಂದಿರ ಬೇಕಾದ ಅರ್ಹತೆಗಳು
* ನೋಂದಣಿ ದಿನಾಂಕದಿಂದ ಮದುವೆ ದಿನಾಂಕದವರೆಗೆ ಮಂಡಳಿಯಲ್ಲಿ ಕನಿಷ್ಠ ಒಂದು ವರ್ಷ ಸದಸ್ಯತ್ವ ಪೂರೈಸಿರಬೇಕು
* ಕಾರ್ಮಿಕರ ಕುಟುಂಬ ಎರಡು ಬಾರಿ ಮಾತ್ರ ಸಹಾಯಧನ ಪಡೆಯಬಹುದು
* ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ತಲುಪಿರಬೇಕು
ಗಮನಿಸಿ
ಮದುವೆ ದಿನಾಂಕದಿಂದ 6 ತಿಂಗಳ ಒಳಗೆ ಅರ್ಜಿ ಸಲ್ಲಿಸಿದಲ್ಲಿ ಮಾತ್ರ ಈ ಸೌಲಭ್ಯವನ್ನು ಪಡೆಯಲು ಸಾಧ್ಯ