ಬೆಂಗಳೂರು : 60 ವರ್ಷ ದಾಟಿದ ನೋಂದಾಯಿತ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಮಾಸಿಕ ಪಿಂಚಣಿ ಸೌಲಭ್ಯವನ್ನು ನೀಡುತ್ತಿದೆ. ಈ ಸೌಲಭ್ಯವನ್ನು ಪಡೆಯಲು ಫಲಾನುಭವಿಯು 60 ವರ್ಷ ಪೂರ್ಣಗೊಳ್ಳುವ ಮೊದಲು ಕನಿಷ್ಠ 3 ವರ್ಷ ನಿರಂತರವಾಗಿ ಮಂಡಳಿಯ ಸದಸ್ಯತ್ವವನ್ನು ನವೀಕರಿಸಿ ಫಲಾನುಭವಿಯಾಗಿ ಮುಂದುವರೆದಿರಬೇಕು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ಅಗತ್ಯ ದಾಖಲೆಗಳು
ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ
ಫಲಾನುಭವಿಯ ಬ್ಯಾಂಕ್ ಪಾಸ್ ಬುಕ್ ನ ವ್ಯಕ್ತಿಗತ ವಿವರಗಳಿರುವ ಪುಟದ ಪ್ರತಿ
ಜೀವಿತ ಪ್ರಮಾಣ ಪತ್ರ ( ಜೀವಿತ ಅವಧಿಯ ವರೆಗೆ ಪ್ರತಿ ವರ್ಷ ಸಲ್ಲಿಸಬೇಕು )
ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಪ್ರತಿ
ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ
ಫಲಾನುಭವಿಯು ಮಂಡಳಿಯ ಅಧಿಕೃತ ವೆಬ್ ಸೈಟ್ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು