ಬೆಂಗಳೂರು: ಕುರುಬ ಸಮುದಾಯದ ಎಸ್ ಟಿ ಸೇರ್ಪಡೆ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದ್ದು, ಕುರುಬ ಸಮುದಾಯವನ್ನು ಎಸ್ ಟಿ ಗೆ ಸೇರಿಸುವ ಕುರಿತು ಸೆಪ್ಟೆಂಬರ್ 16 ರ ಇಂದು ಮಹತ್ವದ ಸಭೆ ನಿಗದಿಯಾಗಿದೆ.
ಎಸ್ಟಿಗೆ ಸೇರಿಸುವ ಕುರಿತು ಪರಿಶಿಷ್ಟ ಪಂಗಡಗಳ ಇಲಾಖೆ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸೆ.16ರಂದು ಸಭೆ ಜಿಲ್ಲೆಗಳಲ್ಲಿರುವ ಕುರುಬ ಸಮುದಾಯವನ್ನು ನಿಗದಿಯಾಗಿದೆ.
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವ ಸಂಬಂಧ ಅನೇಕ ವರ್ಷಗಳಿಂದ ಒತ್ತಾಯಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಕಳೆದ ಜುಲೈನಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಎರಡು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರಸ್ತಾವನೆಯಲ್ಲಿ ರಾಜ್ಯದಲ್ಲಿರುವ ಕುರುಬ ಸಮುದಾಯದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಉಲ್ಲೇಖಿಸಲಾಗಿತ್ತು.
ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿರುವ ಕುರುಬ ಸಮುದಾಯವನ್ನು ಸಮಾನಾರ್ಥಕವಾದ ಗೊಂಡ ಸಮುದಾಯಕ್ಕೆ ಸೇರ್ಪಡೆ ಕುರಿತು ಈ ಸಭೆ ಚರ್ಚಿಸಲಿದೆ. ಸಭೆಯಲ್ಲಿ ಮೈಸೂರಿನ ಬುಡಕಟ್ಟು ಸಂಶೋಧನಾ ಸಂಸ್ಥೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ನಿರ್ದೇಶಕರು ಹಾಗೂ ಸಮಾಜ ಕಲ್ಯಾಣ ಇಲಾಖೆ ಎಸ್ಸಿಎಸ್ಪಿ, ಟಿಎಸ್ಪಿ ನೋಡಲ್ ಏಜನ್ಸಿ ಸಲಹೆಗಾರರು ಭಾಗವಹಿಸಲಿದ್ದಾರೆ.
