ಬೆಂಗಳೂರು: ರಾಜ್ಯದಲ್ಲಿ ಆಸ್ತಿಗಳಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಆ ಮೂಲಕ ಅನಧಿಕೃತ ನಿವೇಶನಗಳಿಗೆ ಬ್ರೇಕ್ ಹಾಕಲಾಗಿದೆ. ಇದೇ ಕಾರಣಕ್ಕಾಗಿ ಕರ್ನಾಟಕ ಮುನಿಸಿಪಲ್ ಕಾಯ್ದೆ ಮತ್ತು ನಿಯಮಗಳಿಗೆ ಫೆಬ್ರವರಿ 2025ರಲ್ಲಿ ತಿದ್ದುಪಡಿಯನ್ನು ತರಲಾಗಿದೆ. ಹಾಗಾದ್ರೆ ನಿಮ್ಮ ಇ-ಖಾತಾ ಸಮಸ್ಯೆಗಳಿಗೆ ಸಂಬಂಧಿಸಿದಂತ ಪ್ರಶ್ನೆಗಳಿಗೆ ಪೌರಾಡಳಿತ ಇಲಾಖೆಯ ಉತ್ತರ ಏನು ಅಂತ ಮುಂದೆ ಓದಿ.
ರಾಜ್ಯ ಪೌರಾಡಳಿತ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರ ಇ-ಖಾತಾ ಕುರಿತಂತ ಸಮಸ್ಯೆಗಳ ಪ್ರಶ್ನೆಗಳಿಗೆ ಉತ್ತರವನ್ನು ನೀಡಲಾಗಿದೆ. ನಿಮ್ಮ ಪ್ರಶ್ನೆಗಳು ಹಾಗೂ ಅದಕ್ಕೆ ಸಂಬಂಧಿಸಿದಂತ ಉತ್ತರ ಈ ಕೆಳಗಿನಂತಿವೆ.
1. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಯಾವೆಲ್ಲಾ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಬೇಕು?
· ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 94 ಮತ್ತು ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ಪ್ರಕರಣ
ವಿನಾಯಿತಿಗೊಳಪಟ್ಟ ಆಸ್ತಿಗಳನ್ನು ಹೊರತುಪಡಿಸಿ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಬೇಕು.
2. “ಎ” ರಿಜಿಸ್ಟರ್ ನಲ್ಲಿ ನಮೂದಿಸಬೇಕಾದ ಆಸ್ತಿಗಳು ಯಾವುವು?
110ರಲ್ಲಿ ಉಳಿದಂತಹ ಕೆಳಕಂಡ ಆಸ್ತಿಗಳನ್ನು ಅಧಿಕೃತ ಪರಿಗಣಿಸಿದ್ದು, ಸದರಿ ಆಸ್ತಿಗಳನ್ನು “ಎ” ರಿಜಿಸ್ಟರ್ ನಲ್ಲಿ ನಮೂದಿಸಬೇಕಾಗಿದೆ;
a) ಗ್ರಾಮಠಾಣಾ,
b) ಸರ್ಕಾರ ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರಗಳು,
c) ಕಂದಾಯ ಇಲಾಖೆಯಿಂದ 94 cc ಅಡಿ ನೀಡಲಾದ ಹಕ್ಕು ಪತ್ರ.
d) ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ಬಡಾವಣೆಯಲ್ಲಿನ ಸ್ವತ್ತುಗಳು.
3. “ಬಿ” ರಿಜಿಸ್ಟರ್ ನಲ್ಲಿ ನಮೂದಿಬೇಕಾದ ಆಸ್ತಿಗಳು ಯಾವುವು?
ಕೆಳಕಂಡ ಆಸ್ತಿಗಳನ್ನು ಅನಧಿಕೃತ ಆಸ್ತಿಗಳೆಂದು ಪರಿಗಣಿಸಿದ್ದು ಸದರಿ ಆಸ್ತಿಗಳನ್ನು “ಬಿ” ರಿಜಿಸ್ಟರ್‌ನಲ್ಲಿ ನಮೂದಿಸಬೇಕಾಗಿರುತ್ತದೆ.
a) ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನಗಳು/ಕಟ್ಟಡಗಳು.
b) ಭೂ ಪರಿವರ್ತನೆಯಾಗದೇ ಉಪವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ/ಕಟ್ಟಡಗಳು.
4. “ಬಿ” ರಿಜಿಸ್ಟರ್ ನಲ್ಲಿ ದಾಖಲಿಸಲಾದ ಆಸ್ತಿಗಳಿಗೆ ತೆರಿಗೆ ವಿಧಿಸಬೇಕೇ ಆಥವಾ ದಂಡ ವಿಧಿಸಬೇಕೇ?
“ಬಿ” ರಿಜಿಸ್ಟರ್ ನಲ್ಲಿ ದಾಖಲಿಸಲಾಗುವ ಆಸ್ತಿಗಳಿಗೆ ಮೂದಲ ಬಾರಿಗೆ ಸ್ವತ್ತು ತೆರಿಗೆಯ 2ರಷ್ಟು ತೆರಿಗೆಯನ್ನು ನಂತರ ವರ್ಷಗಳಲ್ಲಿ ಸ್ವತ್ತು ತೆರಿಗೆಯನ್ನು ಮಾತ್ರ ವಿಧಿಸುವುದು.
5. ಯಾವ ದಿನಾಂಕದವರೆಗೆ ಸೃಜನೆಯಾದ ಆಸ್ತಿಗಳನ್ನು “29” ರಿಜಿಸ್ಟರ್ ನಲ್ಲಿ ದಾಖಲಿಸಬೇಕು?
· ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 106 ಮತ್ತು ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ಪ್ರಕರಣ 112 (ಬಿ) ಗೆ ದಿನಾಂಕ:10-09- 2024ರಲ್ಲಿ ತಿದ್ದುಪಡಿ ತರಲಾಗಿದ್ದು ಸದರಿ ತಿದ್ದುಪಡಿಯ ಪೂರ್ವದಲ್ಲಿ ಸೃಜಿಸಲಾದ ಅನಧಿಕೃತ ಆಸ್ತಿಗಳಲ್ಲಿ “ಬಿ” ರಿಜಿಸ್ಟರ್‌ನಲ್ಲಿ ದಾಖಲಿಸಬೇಕು.
6. “ಬಿ” ರಿಜಿಸ್ಟರ್ ನಲ್ಲಿ ದಾಖಲಿಸಲು ಪಡೆಯಬೇಕಾದ ದಾಖಲೆಗಳು ಯಾವುವು?
ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ನೋಂದಾಯಿತ ಮಾರಾಟ ಪತ್ರಗಳು/ದಾನಪತ್ರ/ವಿಭಾಗ ಪತ್ರಗಳು.
7. ಯಾವ ವರ್ಷದಿಂದ “ಬಿ” ರಿಜಿಸ್ಟರ್ ನಲ್ಲಿ ದಾಖಲಿಸುವ ಆಸ್ತಿಗಳಿಗೆ ಆಸ್ತಿ ತೆರಿಗೆ ವಿಧಿಸಬೇಕಾಗಿರುತ್ತದೆ.?
• ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 106 ಮತ್ತು ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ಪ್ರಕರಣ 112 (ಬಿ) ಗೆ ತಿದ್ದುಪಡಿ ದಿನಾಂಕ:10-09-2024ರಿಂದ ಜಾರಿಗೆ ಬಂದಿದ್ದು 2024-25ನೇ ಸಾಲಿನಿಂದ ಆಸ್ತಿ ತೆರಿಗೆ ವಿಧಿಸಬೇಕಾಗಿರುತ್ತದೆ.
8. “ಬಿ” ರಿಜಿಸ್ಟರ್ ನಲ್ಲಿ ನಮೂದಿಸಲು ಅವಕಾಶವಿಲ್ಲದಿರುವ ಸ್ವತ್ತುಗಳು ಯಾವುವು?
ಸರ್ಕಾರಿ ಜಾಗದಲ್ಲಿರುವ ಸ್ವತ್ತುಗಳು
ಸರ್ಕಾರದ ನಿಗಮ ಮಂಡಳಿಗಳ ಜಾಗಗಳು.
ನಗರ ಸ್ಥಳೀಯ ಸಂಸ್ಥೆಗಳ ಜಾಗದಲ್ಲಿನ ಸ್ವತ್ತುಗಳು.
9. “ಬಿ” ರಿಜಿಸ್ಟರ್ ನಲ್ಲಿ ದಾಖಲಿರುವ ಆಸ್ತಿಗಳಿಗೆ ಉದ್ಯತಾ/ಖಾತಾ ನೀಡಬಹುದೇ.?
• “ಬಿ” ರಿಜಿಸ್ಟರ್ ನಲ್ಲಿ ದಾಖಲಿರುವ ಆಸ್ತಿಗಳಿಗೆ ಇ-ಆಸ್ತಿ ತಂತ್ರಾಂಶದಲ್ಲಿ ನಮೂನೆ 2ಎ/3ಎ ಸೃಜಿಸಿ ನೀಡಬಹುದಾಗಿದೆ.
10. ಅನಧಿಕೃತ ಸ್ವತ್ತುಗಳಿಗೆ ನಮೂನೆ 2ಎ/3ಎ ನೀಡಿದ್ದಲ್ಲಿ ಸಕ್ರಮಗೊಳಿಸಿದಂತಾಗುವುದೇ?.
• ಇಲ್ಲ. ಆಸ್ತಿ ತೆರಿಗೆ ವಿಧಿಸುವ ಉದ್ದೇಶಕ್ಕಾಗಿ ಪ್ರತ್ಯೇಕ ವಹಿಯಲ್ಲಿ ಅನಧಿಕೃತ ಸ್ವತ್ತುಗಳನ್ನು ದಾಖಲಿಸಿ ನಿರ್ವಹಿಸಲಾಗುತ್ತಿದೆ.
11. ಇ-ಖಾತಾ ಪಡೆಯಲು ಸಮಸ್ಯೆಗಳಿದ್ದಲ್ಲಿ ಯಾರನ್ನು ಸಂಪರ್ಕಿಸಬೇಕು?
• ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಯಲ್ಲಿ ಸ್ಥಾಪಿಸಲಾಗಿರುವ ಸಹಾಯವಾಣಿಯನ್ನು ಸಂಪರ್ಕಿಸುವುದು.
12. ಇ-ಖಾತಾ ಪಡೆಯಲು ಸಮಸ್ಯೆಗಳಿದ್ದಲ್ಲಿ ರಾಜ್ಯ ಮಟ್ಟದಲ್ಲಿ ಯಾರನ್ನು ಸಂಪರ್ಕಿಸಬೇಕು?
· ರಾಜ್ಯ ಮಟ್ಟದಲ್ಲಿ ಸ್ಥಾಪಿಸಲಾದ ಸಹಾಯವಾಣಿ: 6366674001 ಸಂಪರ್ಕಿಸಬಹುದಾಗಿದೆ.