ಮಂಡ್ಯ : ವಕ್ಫ್ ವಿರುದ್ಧ ಬಿಜೆಪಿಯ ಇನ್ನೊಂದು ತಂಡವು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದೆ. ಈ ಒಂದು ಪ್ರತಿಭಟನೆ ನೇತೃತ್ವವನ್ನು ಶಾಸಕ ಬಸನಗೌಡ ಪಾಟೀಲ ವಹಿಸಿದ್ದು, ಈ ತಂಡದಲ್ಲಿ ಶಾಸಕರಾದ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಸಿರಿದಂತೆ ಬಿಜೆಪಿಯ ಅಸಮಾಧಾನದ ಹಲವು ಭಾಗಿಯಾಗಿದ್ದಾರೆ. ಪ್ರತಿಭಟನೆಯ ವೇಳೆ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿವೈ ವಿಜಯೇಂದ್ರ ವಿರುದ್ಧ ಕೂಡ ವಾಗ್ದಾಳಿ ನಟಿಸಿದ್ದಾರೆ.
ಇದೆ ವೇಳೆ ಮಂಡ್ಯದಲ್ಲಿ ಬಿಜೆಪಿಯ ಮುಖಂಡರೊಬ್ಬರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರದಲ್ಲಿ ರಕ್ತದಲ್ಲಿ ಸಹಿ ಮಾಡುವ ಮೂಲಕ ಶಾಸಕ ಯತ್ನಾಳ ಹೇಳಿಕೆಗೆ ಕಡಿವಾಣ ಹಾಕಿ ಎಂದು ಮನವಿ ಮಾಡಿಕೊಂಡಿದ್ದಾರೆ. ಮಂಡ್ಯದ ಅಂಚೆ ಕಚೇರಿ ಮೂಲಕ ಹೈಕಮಾಂಡ್ಗೆ ಪತ್ರ ಬರೆದಿದ್ದಾರೆ. ಶಾಸಕ ಯತ್ನಾಳ್ ಮಾತಿನಿಂದ ಪಕ್ಷಕ್ಕೆ ಬಹಳ ಡ್ಯಾಮೇಜ್ ಆಗುತ್ತಿದೆ ಎಂದು ಪತ್ರದ ಮೂಲಕ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಪತ್ರ ಬರೆದಿದ್ದಾರೆ.
ಬಸನಗೌಡ ಯತ್ನಾಳ್ ಅವರು ಕಾಂಗ್ರೆಸ್ ಪಕ್ಷ ವಿರುದ್ಧ ಹೋರಾಟ ಮಾಡುತ್ತಿದ್ದಾರೋ ಅಥವಾ ಬಿಎಸ್ ಯಡಿಯೂರಪ್ಪ ಅವರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಹೋರಾಟ ಮಾಡುತ್ತಿದ್ದಾರೋ ಗೊತ್ತಾಗುತ್ತಿಲ್ಲ. ರಕ್ತದಲ್ಲಿ ಸಹಿ ಮಾಡಿ ಪತ್ರ ಬರೆದಿದ್ದೇವೆ. ಈ ಪತ್ರದ ಸಾರಾಂಶ ಏನೆಂದರೆ ಅವರ ಮಾತಿನಿಂದ ನಮ್ಮ ಪಕ್ಷಕ್ಕೆ ಹಿನ್ನಡೆ ಆಗುತ್ತಿದೆ. ನಮ್ಮ ಕಾರ್ಯಕರ್ತರಿಗೆ ಮುಜುಗರ ಆಗುತ್ತಿದೆ ನಮ್ಮ ಪಾರ್ಟಿಗೆ ಮುಜುಗರ ಆಗುತ್ತಿದೆ. ಬಿಎಸ್ ಯಡಿಯೂರಪ್ಪ ಅವರ ನಿಷ್ಠಾವಂತ ಅಭಿಮಾನಿಗಳಿಗೆ ಮನಸಿಗೆ ನೋವು ತರುತ್ತದೆ ಯತ್ನಾಳ್ ಮಾತಿಗೆ ಕಡಿವಾಣ ಹಾಕಿಸಿ ಎಂದು ಪತ್ರದಲ್ಲಿ ಮನವಿ ಮಾಡಿದ್ದೇವೆ ಎಂದು ಮುಖಂಡ ರವಿಕುಮಾರ್ ತಿಳಿಸಿದರು.