ಬೆಂಗಳೂರು : ರಾಜ್ಯದಲ್ಲಿ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಿಯಮಗಳ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೃಷಿ ಇಲಾಖೆ ಎಚ್ಚರಿಸಿದೆ. ಇಲಾಖೆಯ ವಿಚಕ್ಷಣ ದಳ ಹಲವೆಡೆ ದಾಳಿ ನಡೆಸಿ 5.29 ಲಕ್ಷ ರು. ಮೌಲ್ಯದ ಅನಧಿಕೃತ ರಸಗೊಬ್ಬರ ಮತ್ತು ಕೀಟನಾಶಕ ವಶಪಡಿಸಿಕೊಂಡಿದ್ದು, ಮಾರಾಟಗಾರರ ಲೈಸೆನ್ಸ್‌ಗಳನ್ನು ಅಮಾನತಿ ನಲ್ಲಿ ಇಡಲಾಗಿದೆ.
ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದವರು, ಕೆಲ ಸಗ ಟು ಮಾರಾಟಗಾರರು ತಮಗೆ ಹಂಚಿಕೆಯಾ ದಗೊಬ್ಬರವನ್ನು ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡಿದ್ದು, ಇವರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ. ಈಗಾಗಲೇ ರಾಜ್ಯದ ಹಲವು ಕಡೆಗಳಲ್ಲಿ ರಸಗೊಬ್ಬರ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೃಷಿ ಅಧಿಕಾರಿಗಳು ಹಲವು ಕಡೆ ದಾಳಿ ನಡೆಸಿ ಗೊಬ್ಬರವನ್ನು ಜಪ್ತಿ ಮಾಡಿದ್ದಾರೆ.