ಬೆಂಗಳೂರು : ಬೆಂಗಳೂರು ಮಹಾನಗರದಲ್ಲಿ ಇತ್ತೀಚಿಗೆ ಡ್ರಗ್ಸ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತೀವೆ. ಈ ಹಿನ್ನೆಲೆಯಲ್ಲಿ ಡ್ರಗ್ಸ್ ತಡೆಗಟ್ಟಲು ಪೊಲೀಸರಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಈಗಾಗಲೇ ಸೂಚಿಸಿದ್ದೇನೆ ಎಂದು ಗೃಹ ಸಚಿವ ಶಿವ ಪರಮೇಶ್ವರ್ ಅವರು ತಿಳಿಸಿದರು.
ಬೆಂಗಳೂರಿನಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಗರದಲ್ಲಿ ನೆಲೆಸಿರುವ ವಿದೇಶಿಗರ ಕುರಿತು ಮಾಹಿತಿ ಸಂಗ್ರಹಿಸುವಂತೆ ಸೂಚಿಸಿದ್ದೇನೆ. ಅಕ್ರಮ ವಲಸಿಗರ ಮಾಹಿತಿಯೂ ಗೊತ್ತಾಗುತ್ತದೆ. ಡ್ರಗ್ಸ್ ದಂಧೆಯನ್ನು ಹತೋಟಿಗೆ ತಂದಿದ್ದೇವೆ. ನಗರದಲ್ಲಿ ಡ್ರಗ್ಸ್ ಸಿಗುತ್ತಿದೆ ಎಂಬ ಮಾತುಗಳು ಸಾರ್ವಜನಿಕರಿಂದ ಬರುತ್ತಿವೆ. ಡ್ರಗ್ಸ್ ಚಟುವಟಿಕೆಗಳನ್ನು ಮಟ್ಟ ಹಾಕಲು ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಇದನ್ನು ನಿರ್ಲಕ್ಷ್ಯಿಸುವ ಪೊಲೀಸ್ ಅಧಿಕಾರಿಗಳನ್ನೆ ಹೊಣೆಯನ್ನಾಗಿ ಮಾಡಲಾಗುವುದು. ಮಹಿಳೆಯರು ಮತ್ತು ಮಕ್ಕಳಾ ಸುರಕ್ಷತೆಗೆ ಸೂಕ್ತ ಕ್ರಮ ತೆಗದುಕೊಂಡಿದ್ದೇವೆ. ನಿರ್ಭಯಾ ಯೋಜನೆಯಡಿ 9 ಸಾವಿರ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ. ಸೇಫ್ಟಿ ಐಲ್ಯಾಂಡ್ಸ್ ಸ್ಥಾಪಿಸಲಾಗಿದೆ. ಬೆಂಗಳೂರು ಸೇಫ್ ಸಿಟಿ ಎಂದು ಸೇಫ್ ಸಿಟಿ ವರದಿ ಬಂದಿದೆ. ಬೆಂಗಳೂರು ನಗರ ಪೊಲೀಸ್ ಇಷ್ಟಕ್ಕೆ ಸಮಾದಾನ ಪಟ್ಟುಕೊಳ್ಳದೇ, ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ ಎಂದು ಹೇಳಿದರು.