ಬೆಂಗಳೂರು : ಕೊಳವೆ ಬಾವಿಗಳಲ್ಲಿ ಮಕ್ಕಳು ಅಪಘಾತಕ್ಕೀಡಾಗುವುದನ್ನು ತಪ್ಪಿಸುವ ಸಲುವಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಮುಂಬರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
ಶಿಕ್ಷೆಯ ಪ್ರಮಾಣ ಹೀಗಿದೆ:
ಕೊಳವೆ ಬಾವಿ ದುರಂತ ಸಂಭವಿಸಿದಲ್ಲಿ ಅದರ ಮಾಲೀಕರಿಗೆ ಅಥವಾ ತಪ್ಪಿತಸ್ಥರಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಲಾಗುವುದು.
ಕೊಳವೆ ಬಾವಿಗಳ ಬಳಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ವಿಫಲರಾದರೆ ₹5 ಸಾವಿರ ದಂಡ ಮತ್ತು 3 ತಿಂಗಳ ಜೈಲು ಶಿಕ್ಷೆಗೆ ಅವಕಾಶ
ಕೊಳವೆ ಬಾವಿ ಕೊರೆಯುವ ಭೂ ಮಾಲೀಕರು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸಿದ್ದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಮತ್ತು ₹20 ಸಾವಿರ ದಂಡವಿಧಿಸಲು ಅವಕಾಶ ಇರಲಿದೆ.