ಶಿವಮೊಗ್ಗ : ಶಿವಮೊಗ್ಗದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಏಕಾಏಕಿ ಹೆಜ್ಜೆನು ದಾಳಿ ಮಾಡಿದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಹೊಸನಗರ ತಾಲೂಕು ರಿಪ್ಪನಪೇಟೆಯಲ್ಲಿ ನಡೆದಿದೆ.
ರಿಪ್ಪನ್ಪೇಟೆ ಗ್ರಾಮದ ಮುಖ್ಯರಸ್ತೆಯಲ್ಲಿನ ಎಸ್ಬಿಐ ಬ್ಯಾಂಕ್ ಮುಂಭಾಗ ಏಕಾಏಕಿ ಜೇನು ನೊಣಗಳು ದಾಳಿ ನಡೆಸಿವೆ. ಈ ವೇಳೆ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಮಕ್ಕಳ ಮೇಲೆ ಹಾಗೂ ಬ್ಯಾಂಕ್ ನೌಕರ ತೌಸಿಫ್ ಅವರ ಮೇಲೆ ಜೇನು ನೊಣಗಳು ದಾಳಿ ನಡೆಸಿವೆ.
ಇದರಲ್ಲಿ ತೌಸಿಫ್ ಅವರ ಮುಖಕ್ಕೆ 20ಕ್ಕೂ ಹೆಚ್ಚು ಜೇನು ನೊಣಗಳು ದಾಳಿ ಮಾಡುತ್ತಿದ್ದಂತಯೇ ಶಾಲಾ ವಿದ್ಯಾರ್ಥಿಗಳು ಓಡಿ ಹೋಗಿ ಬಚಾವ್ ಆಗಿದ್ದಾರೆ. ಆದರೂ ವಿದ್ಯಾರ್ಥಿಗಳಿಗೆ ಸ್ವಲ್ಪ ಪ್ರಮಾಣದಲ್ಲಿ ಜೇನು ಕಚ್ಚಿವೆ. ತಕ್ಷಣ ಎಲ್ಲರನ್ನೂ ರಿಪ್ಪನ್ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿದೆ.








