ನವದೆಹಲಿ : ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ಶಾಸಕ ಸ್ಥಾನ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಚುನಾವಣಾ ಆಯೋಗಕ್ಕೆ ಮರುಮತ ಎಣಿಕೆ ಮಾಡುವಂತೆ ಮಹತ್ವದ ಸೂಚನೆ ನೀಡಿದೆ.
ಹೌದು ಹೈಕೋರ್ಟ್ ಆದೇಶ ಪ್ರಶ್ನಿಸಿ ನಂಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾ.ಸೂರ್ಯ ಕಾಂತ್ ಹಾಗೂ ನ್ಯಾ.ಜೊಯಮಲ್ಯ ಬಾಗ್ನಿ ಅವರ ಪೀಠ ದಿಂದ ಮಂಗಳವಾರ ವಿಚಾರಣೆ ನಡೆಸಲಾಯಿತು. ಈ ವೇಳೆ ತಡೆಯಾಜ್ಞೆ ನೀಡಿದೆ.
2023ರ ಚುನಾವಣೆ ಯಲ್ಲಿ ಮಾಲೂರು ಕ್ಷೇತ್ರದ ಮತ ಎಣಿಕೆ ಯಲ್ಲಿ ಅಕ್ರಮ ಪ್ರಕರಣದಲ್ಲಿ ಸೆ.16 ರಂದು ಹೈಕೋರ್ಟ್ ಕಾಂಗ್ರೆಸ್ ಶಾಸಕ ನಂಜೇಗೌಡ ಆಯ್ಕೆಯನ್ನು ರದ್ದುಪಡಿಸಿತ್ತು. ಸುಪ್ರೀಂ ಮೇಲ್ಮನವಿಗೆ ತಿಂಗಳ ಅವಕಾಶ ನೀಡಿತ್ತು.
ಸುಪ್ರೀಂ ಕೋರ್ಟ್, ಫಲಿತಾಂಶ ವನ್ನು ಯಾವುದೇ ಕಾರಣಕ್ಕೂ ಪ್ರಕಟ ಮಾಡದೇ ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ಗೆ ಸಲ್ಲಿಸುವಂತೆ ತಿಳಿಸಿದೆ. ಫಲಿ ತಾಂಶ ಬರುವವರೆಗೂ ಶಾಸಕ ಸ್ಥಾನ ಅಬಾಧಿತ ಎಂದು, ವಿಚಾರಣೆ 4 ವಾರ ಮುಂದೂಡಿದೆ. ನಂಜೇಗೌಡ ಪರವಾಗಿ ವಕೀಲ ಅಭಿಷೇಕ್ ಮನು ಸಿಂಫ್ಟಿ ವಾದ ಮಂಡಿಸಿದರು.