ಬೆಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ ಐವತ್ತು ಸಾವಿರದಿಂದ ಒಂದು ಲಕ್ಷಕ್ಕೆ ಏರಿಕೆ ಮಾಡುವುದಾಗಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ.
ಕರ್ನಾಟಕ ಸಂಭ್ರಮ 50 ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಐವತ್ತು ಮಹಿಳಾ ಸಾಧಕಿಯರು ಹಾಗೂ 50ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದ್ದು ಪ್ರಶಸ್ತಿ ಮೊತ್ತವನ್ನು 50,000 ಎಂದು ತಿಳಿಸಲಾಗಿತ್ತು ಎಂದಿದ್ದಾರೆ.
ಇದೊಂದು ಐತಿಹಾಸಿಕ ಸಂದರ್ಭ ವಾಗಿರುವುದರಿಂದ ಈ ಪ್ರಶಸ್ತಿ ಮೊತ್ತವನ್ನು 50,000 ದಿಂದ ರೂ.1ಲಕ್ಷಗಳಿಗೆ ಹೆಚ್ಚಿಸುವುದು ಸೂಕ್ತವೆಂದು ಸರ್ಕಾರ ಅಭಿಪ್ರಾಯ ಪಟ್ಟಿರುವುದರಿಂದ ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತವನ್ನು ಒಂದು ಲಕ್ಷ ರೂಪಾಯಿ ಎಂದು ಘೋಷಿಸಲು ಹರ್ಷಿಸುತ್ತೇನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ.
ಇದಕ್ಕೆ ಕಾರಣಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಹ ಅವರು ತಿಳಿಸಿದ್ದಾರೆ.