ಬೆಂಗಳೂರು : ನಗರದಲ್ಲಿ ಬೇಕರಿ, ಜ್ಯೂಸ್ ಅಂಗಡಿ, ಕಾಂಡಿಮೆಂಟ್ಸ್ ಅಂಗಡಿ ಇಟ್ಟುಕೊಂಡು ಬದುಕು ನಡೆಸುತ್ತಿರುವ ಸಣ್ಣ ವ್ಯಾಪಾರಿಗಳಿಗೆ ಕಮರ್ಷಿಯಲ್ ಟ್ಯಾಕ್ಸ್ ಇಲಾಖೆ ಅವರ ಬದುಕಿನ ಅತಿ ದೊಡ್ಡ ಶಾಕ್ ನೀಡಿದೆ. ವ್ಯಾಪಾರಿಗಳ ಅಪರಾಧವೆಂದರೆ ಗ್ರಾಹಕರಿಂದ ಆನ್ಲೈನ್ ಮುಖಾಂತರ ಹಣ ಸ್ವೀಕರಿಸಿರುವುದು. ವ್ಯಾಪಾರಿಗಳು ವ್ಯಾಪಾರ ಶುರುಮಾಡಿದಾಗಿನಿಂದ ಇದುವರೆಗೆ ನಡೆಸಿರುವ ವಹಿವಾಟಿನ ಮೇಲೆ ವಾಣಿಜ್ಯ ತೆರಿಗೆ ಕಟ್ಟಬೇಕೆಂದು ಇಲಾಖೆ ನೋಟೀಸ್ ಕಳಿಸಿದೆ.
ಆದರೆ ಇದೀಗ ವಾಣಿಜ್ಯ ಇಲಾಖೆ ಅಂಗಡಿ ಮಾಲೀಕರಿಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದು, 40 ಲಕ್ಷ ರೂಪಾಯಿಗಿಂತ ಅಧಿಕ ವಹಿವಾಟು ನಡೆಸಿದ ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿಗಳು ಕಮರ್ಷಿಯಲ್ ಟ್ಯಾಕ್ಸ್ ಪಾವತಿ ಮಾಡಬೇಕೆಂಬ ನೋಟಿಸ್‌ಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದ್ದು, ವಾರ್ಷಿಕ ವಹಿವಾಟು 1.5 ಕೋಟಿಗಿಂತ ಕಡಿಮೆ ಇದ್ದರೇ ಅಂತಹ ವರ್ತಕರು ಕೇವಲ ಶೇ 1 ರಷ್ಟು ಮಾತ್ರ ತೆರಿಗೆ ಪಾವತಿಸಬಹುದಾಗಿದೆ ಎಂದು ಹೇಳಿದೆ.
ಹೌದು ಜುಲೈ 1, 2017 ರಿಂದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯು ದೇಶಾದ್ಯಂತ ಜಾರಿಗೆ ಬಂದಿರುತ್ತದೆ. ಈ ಕಾಯ್ದೆಯ ಕಲಂ 22 ರನ್ವಯ ಸರಕು ಪೊರೈಕೆದಾರರ ಸಮಗ್ರ ವಹಿವಾಟು ಒಂದು ಹಣಕಾಸು ವರ್ಷದಲ್ಲಿ 40 ಲಕ್ಷ ರೂಪಾಯಿಗಳನ್ನು ಮೀರಿದರೆ ಅಥವಾ ಸೇವೆಗಳ ಪೊರೈಕೆದಾರರ ಸಮಗ್ರ ವಹಿವಾಟು ಒಂದು ಹಣಕಾಸು ವರ್ಷದಲ್ಲಿ 20 ಲಕ್ಷ ರೂಪಾಯಿಗಳನ್ನು ಮೀರಿದರೆ ಜಿಎಸ್‌ಟಿ ನೋಂದಣಿ ಪಡೆಯುವುದು ಕಡ್ಡಾಯವಾಗಿದೆ.
40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದು ಸರಕು ಮತ್ತು ಸೇವಾ ತೆರಿಗೆ ಕಾಯ್ದೆ – 2017 ರಡಿಯಲ್ಲಿ ನೋಂದಣಿಯನ್ನು ಪಡೆಯದೆ, ತೆರಿಗೆ ಪಾವತಿಸದೆ ಇರುವ ವರ್ತಕರಿಗೆ ನೋಟೀಸ್ ಜಾರಿಗೊಳಿಸಲಾಗಿದೆ. ಈ ನೋಟಿಸುಗಳಿಗೆ, ವರ್ತಕರು ತಾವು ಮಾರಾಟ ಮಾಡಿದ ಸರಕು ಮತ್ತು ಸೇವೆಗಳ ವಿವರಗಳನ್ನು ನೀಡಿ ಸರಿಯಾದ ತೆರಿಗೆಯನ್ನು ಪಾವತಿಸಬೇಕು. ಇಂತಹ ವರ್ತಕರು ತಕ್ಷಣ ನೋಂದಣಿ ಪಡೆಯಬೇಕು. ವಾರ್ಷಿಕ ವಹಿವಾಟು 1.5 ಕೋಟಿ ರೂಪಾಯಿಗಳಿಗಿಂತ ಕಡಿಮೆ ಇರುವ ಸಣ್ಣ ವರ್ತಕರು ರಾಜಿ ತೆರಿಗೆಯನ್ನು ಆಯ್ಕೆ ಮಾಡಿ, ಇನ್ಮುಂದೆ ಶೇ 1 ರಷ್ಟು ತೆರಿಗೆ ಪಾವತಿಸಬಹುದಾಗಿದೆ.
ಜಿಎಸ್‌ಟಿ ನಿಯಮಗಳು ಮತ್ತು ನೋಂದಣಿ ಕಡ್ಡಾಯ
ಜುಲೈ 1, 2017 ರಿಂದ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕಾಯ್ದೆಯ ಕಲಂ 22 ರ ಅನ್ವಯ, ಸರಕು ಪೂರೈಕೆದಾರರ ಒಟ್ಟು ವಹಿವಾಟು ಒಂದು ಹಣಕಾಸು ವರ್ಷದಲ್ಲಿ 40 ಲಕ್ಷ ರೂಪಾಯಿಗಳನ್ನು ಮೀರಿದರೆ ಅಥವಾ ಸೇವೆಗಳ ಪೂರೈಕೆದಾರರ ಒಟ್ಟು ವಹಿವಾಟು 20 ಲಕ್ಷ ರೂಪಾಯಿಗಳನ್ನು ಮೀರಿದರೆ, ಜಿಎಸ್‌ಟಿ ನೋಂದಣಿ ಪಡೆಯುವುದು ಕಡ್ಡಾಯವಾಗಿದೆ.
ನೋಟಿಸ್‌ಗೆ ಕಾರಣ ಮತ್ತು ಇಲಾಖೆಯ ಸ್ಪಷ್ಟನೆ
ಯುಪಿಐ (UPI) ಮೂಲಕ 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚು ಹಣವನ್ನು ಸ್ವೀಕರಿಸಿದ ಮತ್ತು ಜಿಎಸ್‌ಟಿ ಕಾಯ್ದೆ-2017 ರ ಅಡಿಯಲ್ಲಿ ನೋಂದಣಿ ಪಡೆಯದೆ, ತೆರಿಗೆ ಪಾವತಿಸದೆ ಇರುವ ವರ್ತಕರಿಗೆ ಇಲಾಖೆಯು ನೋಟಿಸ್ ಜಾರಿಗೊಳಿಸಿತ್ತು. ಈ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ, ವರ್ತಕರು ತಾವು ಮಾರಾಟ ಮಾಡಿದ ಸರಕು ಮತ್ತು ಸೇವೆಗಳ ವಿವರಗಳನ್ನು ನೀಡಿ ಸರಿಯಾದ ತೆರಿಗೆಯನ್ನು ಪಾವತಿಸಬೇಕು ಎಂದು ಇಲಾಖೆ ತಿಳಿಸಿತ್ತು. ಆದರೆ, 40 ಲಕ್ಷ ರೂಪಾಯಿಗಳಿಗಿಂತ ಅಧಿಕ ವಹಿವಾಟು ನಡೆಸಿದ ಬೇಕರಿ, ಕಾಂಡಿಮೆಂಟ್ಸ್, ಬೀಡಾ ಅಂಗಡಿಗಳು ವಾಣಿಜ್ಯ ತೆರಿಗೆ ಪಾವತಿಸಬೇಕೆಂಬ ನೋಟಿಸ್‌ಗೆ ವ್ಯಾಪಾರಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ, ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದೆ.