ಬೆಂಗಳೂರು: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮಾಂಥೆರೋ ಇಂದು ಅಥವಾ ನಾಳೆ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ನಟ ದರ್ಶನ್ ಆಶೀರ್ವಾದ ಪಡೆಯಲಿದ್ದಾರೆ ಎನ್ನಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಹೀಗಾಗಿ ಇಂದು ಅಥವಾ ನಾಳೆ ನಟ ದರ್ಶನ್ ಅವರನ್ನು ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
ಇನ್ನು ತಮ್ಮ ಮದುವೆಯ ಮೊದಲ ಆಮಂತ್ರಣ ಪತ್ರಿಕೆಯನ್ನು ತರುಣ್, ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ ದರ್ಶನ್ ನೀಡಿ ಆಶೀರ್ವಾದ ಪಡೆದು ಬಂದಿದ್ದರು.