ಬೆಂಗಳೂರು : ಕಾಲುವೆ ನೀರು ಅಕ್ರಮ ಬಳಕೆ ತಡೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಡಿಸಿಎಂ ಡಿ,ಕೆ. ಶಿವಕುಮಾರ್ ಮಾಹಿತಿ ನೀಡಿದ್ದು, ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತದಂತೆ ರೈತರಲ್ಲಿ ಅರಿವು ಮೂಡಿಸುವ ಜೊತೆಗೆ ಇದರ ನಿಯಂತ್ರಣಕ್ಕಾಗಿ ನೀರಾವರಿ ಹಾಗೂ ಇಂಧನ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್ಫೋರ್ಸ್ ರಚಿಸಲಾಗುವುದು ಎಂದು ತಿಳಿಸಿದ್ದಾರೆ.