ಚಿಕ್ಕೋಡಿ : ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಾಲಾ ಶಿಕ್ಷಕ ಸಾದಿಕ್ ಬೇಗ್ ಎಂಬಾತನನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಶಿಕ್ಷಕ ವಿದ್ಯಾರ್ಥಿನಿಯರಿಗೆ ಮುಟ್ಟಬಾರದ ಜಾಗದಲ್ಲಿ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಶೌಚಾಲಯಕ್ಕೆ ಹೋಗಿದ್ದಾಗ ಪ್ರೈವೇಟ್ ಪಾರ್ಟ್ ಫೋಟೋ ತೆಗೆದು ಕೊಂಡು ಬರುವಂತೆ ಒತ್ತಾಯಿಸುತ್ತಿದ್ದ. ಫೋಟೋಗಳನ್ನು ಮೊಬೈಲ್ ನಲ್ಲಿ ಸೇವ್ ಮಾಡಿಕೊಂಡು ವಿಕೃತಿ ಮೆರೆಯುತ್ತಿದ್ದ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.
ಈ ಬಗ್ಗೆ ಓರ್ವ ವಿದ್ಯಾರ್ಥಿನಿಯ ತಾಯಿಯ ಗಮನಕ್ಕೆ ತಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಮೇಲೆ ಕಳೆದ ಒಂದು ವರ್ಷದಿಂದ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಬಳಿಕ ಬಾಲಕಿಯ ತಂದೆ ಇತರೆ ಪೋಷಕರಿಗೆ ಮಾಹಿತಿ ನೀಡಿ ವಿಚಾರಿಸಿದಾಗ ಅನೇಕ ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವುದು ಪತ್ತೆಯಾಗಿದೆ. ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದ ಪೊಲೀಸರು ಆರೋಪಿಯನ್ನು ಪೋಕ್ಸೋ ಪ್ರಕರಣದಲ್ಲಿ ಬಂಧಿಸಲಾಗಿದೆ.