ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಿಗಿಂದ ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿದೆ. ಬೀದರ್, ವಿಜಯಪುರ, ಗದಗ, ರಾಯಚೂರು, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಹಾಗೂ ಶಿವಮೊಗ್ಗದಲ್ಲಿ ಮಂಗಳವಾರ ಕನಿಷ್ಠ ತಾಪಮಾನದಲ್ಲಿ ವಾಡಿಕೆಗಿಂತ 2-3 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆ ಉಷ್ಣಾಂಶ ದಾಖಲಾಗಿದೆ.
ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಕೋಲಾರ, ಬಾಗಲಕೋಟೆ, ಕೊಪ್ಪಳ, ಹಾವೇರಿ, ಉಡುಪಿ ಮತ್ತು ದಕ್ಷಿಣ ಕನ್ನಡ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ವಾಡಿಕೆಯಂತೆ ಉಷ್ಣಾಂಶ ದಾಖಲಾಗುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.