ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಲವಾಗುತ್ತಿದ್ದು, ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶದ ಪ್ರಮಾಣ 15 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಒಂದೆರಡು ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಕನಿಷ್ಠ ಉಷ್ಣಾಂಶ 10.6, ಚಿಕ್ಕಮಗಳೂರು ಜಿಲ್ಲೆಯಲ್ಲಿ 10.2, ಚಿಂತಾಮಣಿ 10.8, ಬೀದರ್ ಹಾಗೂ ದಾವಣೆಗೆರೆಯಲ್ಲಿ ತಲಾ 11, ಬೆಳಗಾವಿಯಲ್ಲಿ 11.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ವಾಡಿಕೆಗಿಂತ 2 ರಿಂದ 3 ಡಿ.ಸೆ.ನಷ್ಟು ಕಡಿಮೆಯಾಗಿದೆ. ಬೆಂಗಳೂರು ನಗರದಲ್ಲಿ ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ ದಿನಗಳಲ್ಲಿ 11 ಡಿ.ಸೆ. ವರೆಗೆ ಇಳಿಕೆಯಾಗುವ ಸಾಧ್ಯತೆ ಇದೆ.