BIG NEWS: ಮಂಗಳೂರಿನಲ್ಲಿ ಬಿಜೆಪಿ ಯುವ ಮುಂಡನ ಭೀಕರ ಕೊಲೆ, ಹಂತಕರಿಗಾಗಿ ಪೋಲಿಸರ ಭೇಟೆ

ಸುಳ್ಳ್ಯ: ಸ್ಥಳೀಯ ಬಿಜೆಪಿಯ ಯುವ ಮುಖಂಡ ಪ್ರವೀಣ್(32) ಎನ್ನುವವರನ್ನು ನಿನ್ನೆ ರಾತ್ರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ನಡೆದಿದೆ. ಹತ್ಯೆಯಾದ ಪ್ರವೀಣ್ ನೆಟ್ಟಾರು ಚಿಕನ್ ಅಂಗಡಿಯ ಮಾಲೀಕ ನಾಗಿದ್ದು, ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಇದೇ ವೇಳೆ ಘಟನೆಯಲ್ಲಿ, ವೀಣ್ ಗಂಭೀರ ಗಾಯಗೊಂಡಿದ್ದರಿಂದ ಅವರು ಸ್ಥಳದಲ್ಲೇ ಕುಸಿದು ಬಿದ್ದರು ಎನ್ನಲಾಗಿದೆ, ಇದೇ ವೇಳೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ದುರಾದೃಷ್ಟವಶಾತ್​ ದಾರಿ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.