ಬೆಂಗಳೂರು : : ಕೋವಿಡ್-19 ರ ತಪಾಸಣಾ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವುದು ಮತ್ತು ಪರೀಕ್ಷಾ ಮಾದರಿಗಳನ್ನು ನಿಗದಿಪಡಿಸಿದ ಪ್ರಯೋಗಶಾಲೆಗಳಿಗೆ ಪರೀಕ್ಷೆಗಾಗಿ ಸಲ್ಲಿಸುವ ಕುರಿತು ಆರೋಗ್ಯ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, RT-PCR ಕೋವಿಡ್-19 ರ ಪರೀಕ್ಷೆ ನಡೆಸಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯದಂತೆ ರಾಜ್ಯದಲ್ಲಿ ದಿನ ನಿತ್ಯ 150 ರಿಂದ 200 ಪರೀಕ್ಷೆಗೆ ನಿಗದಿಪಡಿಸಲಾಗಿದ್ದು, ಎಲ್ಲಾ SARI ಪ್ರಕರಣಗಳಲ್ಲಿ ಕೋವಿಡ್-19 ಸೋಂಕನ್ನು ಧೃಡ ಪಡಿಸಿಕೊಳ್ಳಲು RT-PCR ಪರೀಕ್ಷೆಗಾಗಿ ಮಾದರಿಯನ್ನು ನಿಗದಿ ಪಡಿಸಿರುವ ಪ್ರಯೋಗಾಲಯಗಳಿಗೆ ಸಲ್ಲಿಸುವುದು. ಎಲ್ಲಾ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರ್ಕಾರಿ ಪ್ರಯೋಗ ಶಾಲೆಗಳಲ್ಲಿಯೇ ನಡೆಸುವುದು ಹಾಗೂ ಲಭ್ಯವಿರುವ ಕೋವಿಡ್-19ರ ಪರೀಕ್ಷಾ ಕಿಟ್‌ಗಳನ್ನು FIFO (First-In-First-Out) ಮಾದರಿಯಲ್ಲಿ ಉಪಯೋಗಿಸಿ ಕೋವಿಡ್-19 ರ ಕಿಟ್ /ಪರಿಕರಗಳು ಅನುಪಯುಕ್ತವಾಗದಂತೆ ಕೋವಿಡ್-19ರ ಪರೀಕ್ಷೆಯನ್ನು ಈ ಕೆಳಕಂಡಂತೆ ಕ್ರಮವಹಿಸುವುದು.
- ಎಲ್ಲಾ SARI ಪ್ರಕರಣಗಳಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.
- ವಯೋವೃದ್ಧರಲ್ಲಿ ಮಕ್ಕಳಲ್ಲಿ, ಗರ್ಭಿಣಿ ಸ್ತ್ರೀಯಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.
- ಅನುಬಂಧ-1ರಂತೆ ಕೋವಿಡ್-19ರ ಪರೀಕ್ಷಾ ಮಾದರಿಯನ್ನು ಪ್ರಯೋಗಶಾಲೆಗಳಿಗೆ ಅದೇ ದಿನ ತಲುಪುವಂತೆ ಕ್ರಮವಹಿಸುವುದು.