ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಗೊಂದಲದ ವಿಚಾರವಾಗಿ ಸಂಕ್ರಾಂತಿ ಮರುದಿನವೇ ಡಿಕೆ ಶಿವಕುಮಾರ್ ದೆಹಲಿ ಪ್ರಯಾಣ ಬೆಳೆಸಲಿದ್ದಾರೆ. ಜನವರಿ 16 ಹಾಗೂ ಜನವರಿ 22ರಂದು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಪ್ರಯತ್ನಿಸುತ್ತಿದ್ದಾರೆ.ಜನಮರಿ 16ರಂದು ರಾಹುಲ್ ಗಾಂಧಿ ಭೇಟಿ ಮಾಡಲು ಸಮಯ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ. ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚಿಸುವ ಸಾಧ್ಯತೆ ಇದ್ದು ಅಸ್ಸಾಂ ವಿಧಾನಸಭಾ ಚುನಾವಣೆಗೆ ಸಂಬಂಧಪಟ್ಟಂತೆ ವೀಕ್ಷಕರ ಸಭೆಯ ಬಳಿಕ ರಾಹುಲ್ ಗಾಂಧಿ ಜೊತೆಗೆ ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ಚರ್ಚಿಸುವ ಸಾಧ್ಯತೆ ಇದೆ.
ಇದೆ ಸಂದರ್ಭದಲ್ಲಿ ರಾಜ್ಯದಲ್ಲಿ ಆಗುತ್ತಿರುವ ಗೊಂದಲಗಳ ಕುರಿತಂತೆ ರಾಹುಲ್ ಗಾಂಧಿ ಅವರ ಜೊತೆಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಜನವರಿ 22ರಂದು ಕೂಡ ದೆಹಲಿಗೆ ಭೇಟಿ ನೀಡಲಿದ್ದಾರೆ. ತಿಂಗಳ ಅಂತ್ಯದ ವೇಳೆಗೆ ನಾಯಕತ್ವ ಗೊಂದಲಕ್ಕೆ ತೆರೆ ಬೀಳುವ ನಿರೀಕ್ಷೆ ಇದೆ. ನಾಯಕತ್ವ ಗೊಂದಲ ಸಂಪುಟ ಪುನಾರಚನ ಗೊಂದಲಕ್ಕೆ ತೆರೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.








