ಬೆಂಗಳೂರು : ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಅನುದಾನ ನೀಡಿರುವ ವಿಚಾರವಾಗಿ ಇಂದಿನಿಂದ ನಾಲ್ಕು ದಿನಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ 28 ಶಾಸಕರನ್ನು ಹೊರತುಪಡಿಸಿ ಉಳಿದ ಎಲ್ಲಾ ಶಾಸಕರ ಜೊತೆಗೆ ಸಭೆ ಮಾಡಲಿದ್ದಾರೆ.ಆದರೆ ಈ ಒಂದು ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಆಹ್ವಾನಿಸಿಲ್ಲ. ಈ ವಿಚಾರವಾಗಿ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದು, ಸಿಎಂ ಆಗಿರುವವರಿಗೆ ಏನು ಅಧಿಕಾರಿಯೋ ಅದನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರಲ್ಲಿ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರ ಸಮಸ್ಯೆ ಕೇಳುವುದಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು ಶಾಸಕರ ಸಮಸ್ಯೆ ಕೇಳೋಕೆ ಸಿಎಂ ಮುಂದಾಗಿದ್ದಾರೆ. ಅವರಿಗೆ ಇರುವ ಅಧಿಕಾರವನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ. ಸುರ್ಜೆವಾಲಾ ಸಾಹೇಬ್ರು ಅನೇಕ ವಿಚಾರ ಹೇಳಿದ್ದಾರೆ ಸಿಎಂ ಸಿದ್ದರಾಮಯ್ಯ ಗಮನಕ್ಕೆ ಅವರು ತಂದಿದ್ದಾರೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು.