ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಅನಾಥವಾಗಿದ್ದ ಶ್ವಾನ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ದುರಂತ ಸಂಭವಿಸಿತ್ತು. ಘಟನೆಯಲ್ಲಿ 11 ಜನರು ಮೃತಪಟ್ಟಿದ್ದರು.
ಗುಡ್ಡ ಕುಸಿತ ದುರಂತದಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ನಡೆಸುತ್ತಿದ್ದ ಲಕ್ಷ್ಮಣ್, ಆತನ ಪತ್ನಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ಕುಟುಂಬದವರನ್ನು ಕಳೆದುಕೊಂಡ ಮನೆಯ ಶ್ವಾನ ಅನಾಥವಾಗಿತ್ತು, ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಶ್ವಾನ ಬಂದು ರೋಧಿಸುತ್ತಿತ್ತು, ಈ ಶ್ವಾನ ಇದೀಗ ಪೊಲೀಸ್ ಇಲಾಖೆ ಸೇರ್ಪಡೆಯಾಗಿದೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ ನಾರಾಯಣ್ ಶ್ವಾನದವನ್ನು ದತ್ತು ಪಡೆದು ಪಳಗಿಸಿದ್ದಾರೆ. ಪೊಲೀಸ್ ಇಲಾಖೆಯಿಂದ ನಡೆದ ಮ್ಯಾರಥಾನ್ ಓಟದಲ್ಲಿ ಈ ಶ್ವಾನ 5 ಕಿಮೀ ಸಂಚರಿಸಿ ಬೆಳ್ಳಿ ಪದಕ ಪಡೆದಿದೆ. ಈ ಮುಲಕ ಅನಾಥವಾಗಿದ್ದ ಶ್ವಾನ ಇದೀಗ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದೆ.