Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಟ್ಯಾಕ್ಟರ್’ ಸೇರಿ ವಿವಿಧ ಉಪಕರಣಗಳ ಖರೀದಿಗೆ ಸಿಗಲಿದೆ ಶೇ.50 ರಷ್ಟು ಸಹಾಯಧನ.!

18/07/2025 6:31 AM

ಭಾರತ-ಚೀನಾ ಸಂಬಂಧದಲ್ಲಿ ಮೂರನೇ ವ್ಯಕ್ತಿಯ ಪಾತ್ರವಿಲ್ಲ: ವಿದೇಶಾಂಗ ಸಚಿವಾಲಯ

18/07/2025 6:31 AM

BIG NEWS : CM ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ `ಸಚಿವ ಸಂಪುಟ ಸಭೆ’ಯ ಪ್ರಮುಖ ನಿರ್ಣಯಗಳು ಹೀಗಿವೆ

18/07/2025 6:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : CM ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ `ಸಚಿವ ಸಂಪುಟ ಸಭೆ’ಯ ಪ್ರಮುಖ ನಿರ್ಣಯಗಳು ಹೀಗಿವೆ
KARNATAKA

BIG NEWS : CM ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ `ಸಚಿವ ಸಂಪುಟ ಸಭೆ’ಯ ಪ್ರಮುಖ ನಿರ್ಣಯಗಳು ಹೀಗಿವೆ

By kannadanewsnow5718/07/2025 6:23 AM

ಬೆಂಗಳೂರು : ರಾಯಚೂರು ಜಿಲ್ಲೆ ತಾಲ್ಲೂಕಿನಲ್ಲಿ ನೂತನ ಜವಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಒಟ್ಟು 24.50 ಕೋಟಿಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 17-07-2025 ರಂದು ನಡೆದ ಸಚಿವ ಸಂಪುಟಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಈ ಕೆಳಗಿನಂತಿವೆ·

ರಾಯಚೂರು ಜಿಲ್ಲೆ ತಾಲ್ಲೂಕಿನಲ್ಲಿ ನೂತನ ಜವಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಒಟ್ಟು 24.50 ಕೋಟಿಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.

· ಕರ್ನಾಟಕ ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ತಾತ್ವಿಕ ಅನುಮೋದನೆ ಹಾಗೂ ಎನ್ ಟಿಪಿಸಿ ಸಂಸ್ಥೆಯು ಕರ್ನಾಟಕದಲ್ಲಿ ಪರಮಾಣು ವಿದ್ಯುತ್ ಸ್ಥಾಪನೆಗೆ ಗುರುತಿಸಿರುವ ಸಂಭಾವ್ಯ ಸ್ಥಳಗಳ್ಲಿ ಪ್ರಾಥಮಿಕ ಅಧ್ಯಯನ ನಡೆಸಲು ಅನುಮತಿ ನೀಡಲು ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

· ಆಯುಷ್ ಇಲಾಖೆಯ ಆಯುರ್ವೇದ, ಸಿದ್ದ ಮತ್ತು ಯುನಾನಿ ಔಷಧಗಳ ಅಮಲುಜಾರಿ ವಿಭಾಗ ಹಾಗೂ ಪರೀಕ್ಷಾ ಪ್ರಯೋಗಾಲಯವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಜೊತೆಗೆ ವಿಲೀನಗೊಳಿಸಲು ನಿರ್ಣಯಿಸಲಾಯಿತು.

· ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಯಳವಟ್ಟಿ ಗ್ರಾಮದಲ್ಲಿ 28.3 ಎಕರೆ ಪ್ರದೇಶದಲ್ಲಿ ಮಾವು ಮತ್ತು ಇತರೆ ತೋಟಗಾರಿಕೆ ಬೆಳೆಗಳ ಬಹು ಉತ್ಪನ್ನಗಳ ನಿರ್ವಹಣೆ, ಸಂಗ್ರಹಣೆ, ಸಂಸ್ಕರಣೆ ಮತ್ತು ಸಂರಕ್ಷಣಾ ಘಟಕವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ (PPP) ಮಾದರಿಯಡಿ ರೂ.35.07 ಕೋಟಿಗಳ ಮೊತ್ತದಲ್ಲಿ Common Infrastructure for Industrial Parks (Food Park) ಮಾದರಿಯಲ್ಲಿ ಸ್ಥಾಪಿಸಲು ಅನುಮೋದನೆ ¤Ãಡಲಾಗಿದೆ.

· ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಸಿರಿವಾರ ಗ್ರಾಮದ ಪರಂಪೋಕ ಸರ್ಕಾರಿ ಸರ್ವೆ ನಂ.124/*/1/ಪಿ2 ನಲ್ಲಿನ 194-33 ಎಕರೆ ಜಮೀನಿನಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿ ರೂ.83.79 ಕೋಟಿ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲಾಗುವುದು.

· ಚಿಕ್ಕಬಳ್ಳಾಪುರ ಜಿಲ್ಲೆ, ಚಿಕ್ಕಬಳ್ಳಾಪುರ ತಾಲ್ಲೂಕು, ಮಂಡಿಕಲ್ಲು ಹೋಬಳಿ, ಯರಮಾರೇನಹಳ್ಳಿ ಗ್ರಾಮದಲ್ಲಿ 5-23 ಎಕರೆ / ಗುಂಟೆ ಸರ್ಕಾರಿ ಬೀಳು ಜಮೀನನ್ನು ಅಕ್ಷಯ ಪಾತ್ರೆ ಅಡುಗೆ ಮನೆ ಮತ್ತು ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ಗ್ರಾಮೀಣ ಮಕ್ಕಳಿಗೆ ಶಾಲಾ ಕಟ್ಟಡ ನಿರ್ಮಾಣಕ್ಕಾಗಿ, ಇಸ್ಕಾನ್ ಬೆಂಗಳೂರು ಇವರಿಗೆ ಮಂಜೂರು ಮಾಡಲು ಸಚಿವ ಸಂಪುಟವು ನಿರ್ಧರಿಸಿದೆ.

· ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ವೀರಭದ್ರನ ಪಾಳ್ಯ ಗ್ರಾಮದ ಸ.ನಂ.66ರಲ್ಲಿ 15 ಗುಂಟೆ ಖರಾಬು ಜಮೀನನ್ನು ಕಾಂಗ್ರೆಸ್ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್ ಇವರಿಗೆ ಗುತ್ತಿಗೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.

· ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕೆಮ್ಮಿಂಜೆ ಗ್ರಾಮದ ಸ.ನಂ.138/4 ರಲ್ಲಿ 3.00 ಎಕರೆ ಗೋಮಾಳ ಜಮೀನನ್ನು ಬಂಟರ ಸಂಘ, ಪುತ್ತೂರು ತಾಲ್ಲೂಕುಮಂಜೂರು ಮಾಡಲಾಗಿದೆ.

· ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವತಿಯಿಂದ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಳವಡಿಸಲಾಗಿರುವ ಸಮರ್ಪಕವಾಗಿ ಕಾರ್ಯನಿರ್ವಹಿಸದ 1,530 ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳ ಉಪಕರಣಗಳನ್ನು ರೂ.19.89 ಕೋಟಿಗಳ ಅಂದಾಜು ಮೊತ್ತದಲ್ಲಿ ಬದಲಿಸಿ ಹೊಸದಾಗಿ ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

· ಮೈಸೂರು ವಿಶ್ವವಿದ್ಯಾಲಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಸಂವಿಧಾನ ಪೀಠವನ್ನು ರೂ.10.00 ಕೋಟಿಗಳ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

· ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಂಪಿ-ಬಾದಾಮಿ-ಐಹೊಳೆ-ಪಟ್ಟದಕಲ್ಲು-ವಿಜಯಪುರ ಒಳಗೊಂಡAತೆ ಉತ್ತರ ಕರ್ನಾಟಕ ಪ್ರವಾಸಿ ವೃತ್ತವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ DBFOT ಮಾದರಿಯಲ್ಲಿ ಕರ್ನಾಟಕ ಪ್ರವಾಸೋದ್ಯಮ ಮೂಲಸೌಲಭ್ಯ ನಿಗಮದ ಮೂಲಕ ರೂ.166.22 ಕೋಟಿಗಳ ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

· ಗ್ರೇಟರ್ ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ “ಎ” ಮತ್ತು “ಬಿ” ಖಾತಾ ನೀಡುವುದನ್ನು ನಿಯಂತ್ರಿಸಲು ಸಚಿವ ಸಂಪುಟ ನಿರ್ಣಯವನ್ನು ಕೈಗೊಂಡಿತು.

· ಮಲಪ್ರಭಾ ನದಿಗೆ ಅಡ್ಡಲಾಗಿರುವ ಮುನವಳ್ಳಿ ಆರ್‌ಬಿಸಿಗೆ ನವಿಲುತೀರ್ಥ ಆಣೆಕಟ್ಟಿನ ಚೈನೇಜ್. 0+098 ರಿಂದ ಚೈನೇಜ್ 0+433 ವರೆಗೆ ಅಕ್ವಾಡಕ್ಟ್ ಅನ್ನು ಎಂಎಸ್ ಪೈಪ್‌ನೊಂದಿಗೆ ನಿರ್ಮಿಸುವ ಕಾಮಗಾರಿಯನ್ನು ರೂ.19.05 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

· ಅಂತರ್ಜಲ ಬಳಕೆಗೆ ನಿರಾಕ್ಷೇಪಣಾ ನೀಡುವ ಸಂಬAಧ ಕೇಂದ್ರಿಯ ಅಂತರ್ಜಲ ಪ್ರಾಧಿಕಾರ ಇವರು ಹೊರಡಿಸಿರುವ ಮಾರ್ಗಸೂಚಿಯನ್ನು ಸೂಕ್ತ ಮಾರ್ಪಾಡುಗಳೊಂದಿಗೆ ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿತು.

· ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳದಲ್ಲಿ ಅಲ್ಪಸಂಖ್ಯಾತರ ವಿದ್ಯಾಥಿನಿಯರಿಗಾಗಿ ವಸತಿ ಸಹಿತ ಪದವಿ ಪೂರ್ವ ಕಾಲೇಜನ್ನು ರೂ.17.09 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಿ 400 ವಿದ್ಯಾರ್ಥಿನಿಯರ ಸಂಖ್ಯಾ ಬಲದೊಂದಿಗೆ ಪ್ರಾರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿತು

· ಚಿಕ್ಕಮಗಳೂರು ಜಿಲ್ಲೆ, ನರಸಿಂಹರಾಜಪುರ ಪಟ್ಟಣದ ರಸ್ತೆಯನ್ನು ರೂ.60.00 ಕೋಟಿಗಳ ಅಂದಾಜು ಮೊತ್ತದಲ್ಲಿ ಅಗಲೀಕರಣ ಮಾಡುವ ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

· ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನಲ್ಲಿ ತಾಲ್ಲೂಕು ಪ್ರಜಾಸೌಧ ಕಟ್ಟಡ ಕಾಮಗಾರಿಯನ್ನು ರೂ.16.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

· ಬೆಂಗಳೂರು ನಗರದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೋಲಾರ ಜಿಲ್ಲೆಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಒಟ್ಟು 126 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಯ 5 ವರ್ಷಗಳ ಪೋಷಣೆ ಮತ್ತು ನಿರ್ವಹಣೆ (O&M) ಕಾಮಗಾರಿಯನ್ನು ರೂ.128.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

· ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲಾ ಕಾಲೇಜುಗಳ ಕಟ್ಟಡ ನಿರ್ಮಾಣದ 4 ಕಾಮಗಾರಿಗಳನ್ನು ಒಟ್ಟು ರೂ.64.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

· ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಕಿತ್ತೂರು ಕೋಟೆ ಆವರಣದಲ್ಲಿ ರೂ.30.00 ಕೋಟಿ ವೆಚ್ಚದ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ.

· ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂಸ್ವಾಧೀನಪಡಿಸಿಕೊಂಡಿದ್ದ ಜಮೀನಗಳನ್ನು ಭೂಸ್ವಾಧೀನ ಕಾಯ್ದೆ 1894ರ ಕಲಂ48(1)ರಡಿ ಭೂಸ್ವಾಧೀನದಿಂದ ಕೈಬಿಟ್ಟಿರುವ 29 ಪ್ರಕರಣಗಳಲ್ಲಿ, ಸಂಬAಧಪಟ್ಟ ಎಲ್ಲಾ ಬಾಧಿತ ವ್ಯಕ್ತಿಗಳಿಗೆ ನೋಟೀಸ್ ನೀಡಿ, ವಿವರಣೆ ಪಡೆದು, ನಿಯಮಬಾಹಿರವಾಗಿ ಭೂಸ್ವಾಧೀನದಿಂದ ಕೈಬಿಟ್ಟಿರುವ ಅಧಿಸೂಚನೆಗಳನ್ನು ಹಿಂಪಡೆಯಲು ಹಾಗೂ ಇದಕ್ಕೆ ಕಾರಣಕರ್ತರಾಗಿರುವ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು; ಸಚಿವ ಸಂಪುಟ ನಿರ್ಧರಿಸಿದೆ.

· ಹಾರಂಗಿ ಜಲಾಶಯದ ಕೆಳಭಾಗದಲ್ಲಿ ಕೊಡಗು ಜಿಲ್ಲೆಯ ಕುಶಾಲನಗರದ ಹುಲುಗುಂದ ಗ್ರಾಮದ ಬಳಿ ಕಮಾನು ಸೇತುವೆ (Arch Bridge) ಯನ್ನು ರೂ.36.50 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಸಚಿವ ಸಂಪುಟ ನಿರ್ಣಯಿಸಿದೆ.

BIG NEWS: The following are the important decisions of the cabinet meeting chaired by CM Siddaramaiah.
Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಟ್ಯಾಕ್ಟರ್’ ಸೇರಿ ವಿವಿಧ ಉಪಕರಣಗಳ ಖರೀದಿಗೆ ಸಿಗಲಿದೆ ಶೇ.50 ರಷ್ಟು ಸಹಾಯಧನ.!

18/07/2025 6:31 AM2 Mins Read

BREAKING : ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ : ಮಾಜಿ ಸಚಿವ ಪಭು ಚೌಹಾಣ್ ಪುತ್ರನ ವಿರುದ್ಧ ದೂರು.!

18/07/2025 6:13 AM1 Min Read

ರಾಜ್ಯದ ಸರ್ಕಾರಿ ಶಾಲೆ ಆಸ್ತಿ ಸಂರಕ್ಷಣೆಗೆ ಮೂರು ತಿಂಗಳು ಅಭಿಯಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ

18/07/2025 6:06 AM5 Mins Read
Recent News

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಟ್ಯಾಕ್ಟರ್’ ಸೇರಿ ವಿವಿಧ ಉಪಕರಣಗಳ ಖರೀದಿಗೆ ಸಿಗಲಿದೆ ಶೇ.50 ರಷ್ಟು ಸಹಾಯಧನ.!

18/07/2025 6:31 AM

ಭಾರತ-ಚೀನಾ ಸಂಬಂಧದಲ್ಲಿ ಮೂರನೇ ವ್ಯಕ್ತಿಯ ಪಾತ್ರವಿಲ್ಲ: ವಿದೇಶಾಂಗ ಸಚಿವಾಲಯ

18/07/2025 6:31 AM

BIG NEWS : CM ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ `ಸಚಿವ ಸಂಪುಟ ಸಭೆ’ಯ ಪ್ರಮುಖ ನಿರ್ಣಯಗಳು ಹೀಗಿವೆ

18/07/2025 6:23 AM

BREAKING : ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ : ಮಾಜಿ ಸಚಿವ ಪಭು ಚೌಹಾಣ್ ಪುತ್ರನ ವಿರುದ್ಧ ದೂರು.!

18/07/2025 6:13 AM
State News
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಟ್ಯಾಕ್ಟರ್’ ಸೇರಿ ವಿವಿಧ ಉಪಕರಣಗಳ ಖರೀದಿಗೆ ಸಿಗಲಿದೆ ಶೇ.50 ರಷ್ಟು ಸಹಾಯಧನ.!

By kannadanewsnow5718/07/2025 6:31 AM KARNATAKA 2 Mins Read

ತೋಟಗಾರಿಕೆ ಇಲಾಖೆಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2025-26 ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ…

BIG NEWS : CM ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ `ಸಚಿವ ಸಂಪುಟ ಸಭೆ’ಯ ಪ್ರಮುಖ ನಿರ್ಣಯಗಳು ಹೀಗಿವೆ

18/07/2025 6:23 AM

BREAKING : ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ : ಮಾಜಿ ಸಚಿವ ಪಭು ಚೌಹಾಣ್ ಪುತ್ರನ ವಿರುದ್ಧ ದೂರು.!

18/07/2025 6:13 AM

ರಾಜ್ಯದ ಸರ್ಕಾರಿ ಶಾಲೆ ಆಸ್ತಿ ಸಂರಕ್ಷಣೆಗೆ ಮೂರು ತಿಂಗಳು ಅಭಿಯಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ

18/07/2025 6:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.