ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಹೀಗಿದೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ಶಾಖಾ ಕಾಲುವೆಯ ಕಾಮಗಾರಿಗಳಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಗತ್ಯವಿರುವ 271 ಎಕರೆ ಜಮೀನನ್ನು ₹77.35 ಕೋಟಿ ವೆಚ್ಚದಲ್ಲಿ ಖರೀದಿಸಲು ನಿರ್ಧಾರ.
ಬೇಡ್ತಿ ನದಿಯಿ೦ದ ನೀರನ್ನು ಎತ್ತಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ 107 ಕೆರೆಗಳನ್ನು ತುಂಬಿಸುವ ₹179.50 ಕೋಟಿ ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ.
ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನೆಯ ಮೂಲಕ ಹಾವೇರಿ ಜಿಲ್ಲೆಯ ಬ್ಯಾಡಗಿ ಮತ್ತು ಹಾನಗಲ್ ತಾಲೂಕಿನ 137 ಕೆರೆಗಳನ್ನು ತು೦ಬಿಸುವ ₹115.60 ಕೋಟಿ ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ.
ವಿಜಯಪುರ ಜಿಲ್ಲೆಯ ಸಿಂದಗಿ ಪುರಸಭೆಯನ್ನು, ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಪುರಸಭೆಯನ್ನು ಹಾಗೂ ಬೀದರ್ ಜಿಲ್ಲೆಯ ಹೂಮ್ನಾಬಾದ್ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ನಿರ್ಧಾರ.
ರಾಜ್ಯದ 22 ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ವಾಸಿಸುತ್ತಿರುವ ನಗರ ಪ್ರದೇಶಗಳಲ್ಲಿನ ಅತಿ ಹಿಂದುಳಿದ ಕಾಲೋನಿಗಳನ್ನು ಮಾದರಿ ಕಾಲೋನಿಗಳಾಗಿ ಅಭಿವೃದ್ಧಿಪಡಿಸಲು ₹398 ಕೋಟಿ ಅಂದಾಜು ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ.
ಬೆಂಗಳೂರು ನಗರದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಸ್ವಂತ ಕಟ್ಟಡ “ಧಾರ್ಮಿಕ ಸೌಧ”ವನ್ನು ₹27.70 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.
ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ.. #CabinetDecisions pic.twitter.com/8biPtQTEjN
— CM of Karnataka (@CMofKarnataka) September 4, 2025
ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ.. #CabinetDecisions pic.twitter.com/WdJqn2YeCB
— CM of Karnataka (@CMofKarnataka) September 4, 2025